For the best experience, open
https://m.newskannada.com
on your mobile browser.
Advertisement

ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ: ಅಪ್ರಾಪ್ತನ ಬಂಧನ

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
05:22 PM May 08, 2024 IST | Ashika S
ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ  ಅಪ್ರಾಪ್ತನ ಬಂಧನ

ಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Advertisement

ಈ ಘಟನೆಯಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಸಿಕ್ಕಿಬಿದ್ದಿದ್ದಾನೆ.

ಮೆಡಿಕಲ್ ಕಾಲೇಜಿಗೆ ರೋಗಿ ನೆಪದಲ್ಲಿ ಬಂದಿದ್ದ ಅಪ್ರಾಪ್ತ, ಬಳಿಕ ಅಲ್ಲೇ ಇದ್ದ ಲೇಡಿಸ್ ಟಾಯ್ಲೆಟ್‌ಗೆ ನುಗ್ಗಿ ಮೊಬೈಲ್ ಇಟ್ಟಿದ್ದಾನೆ. ಮೊಬೈಲ್ ಇಟ್ಟುಬಂದ ಸ್ವಲ್ಪ ಹೊತ್ತಿನಲ್ಲೇ ಮೊಬೈಲ್ ರಿಂಗ್ ಆಗುವುದು ಕೇಳಿಸಿದೆ. ಕೂಡಲೇ ಟಾಯ್ಲೆಟ್ ಕೊಠಡಿಯೊಳಗೆ ಬಂದ ಭದ್ರತಾ ಸಿಬ್ಬಂದಿ ಹುಡುಕಾಡಿದಾಗ ಮೊಬೈಲ್ ಕಣ್ಣಿಗೆ ಬಿದ್ದಿದೆ.

Advertisement

ಸದ್ಯ ಮೊಬೈಲ್‌ನಲ್ಲಿ ಯಾವುದೇ ದೃಶ್ಯ ಸೆರೆಯಾಗಿಲ್ಲ ಎಂದು ತಿಳಿದು ಬಂದಿದೆ. ಬಳಿಕ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸ್ ಕಾಲೇಜು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Advertisement
Tags :
Advertisement