For the best experience, open
https://m.newskannada.com
on your mobile browser.
Advertisement

ಖಲಿಸ್ತಾನಿ ಪರ ಘೋಷಣೆಗಳನ್ನು ಬರೆದು ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಕಿಡಿಗೇಡಿಗಳು

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆದು ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಘಟನೆ ಕ್ಯಾಲಿಫೋರ್ನಿಯಾದ ನೆವಾರ್ಕ್‌ ನಗರದಲ್ಲಿ ನಡೆದಿದೆ.
12:39 PM Dec 23, 2023 IST | Ramya Bolantoor
ಖಲಿಸ್ತಾನಿ ಪರ ಘೋಷಣೆಗಳನ್ನು ಬರೆದು ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಕಿಡಿಗೇಡಿಗಳು

ವಾಷಿಂಗ್ಟನ್‌: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆದು ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಘಟನೆ ಕ್ಯಾಲಿಫೋರ್ನಿಯಾದ ನೆವಾರ್ಕ್‌ ನಗರದಲ್ಲಿ ನಡೆದಿದೆ.

Advertisement

ಅಮೆರಿಕದ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಗಳ ಮೇಲೆ ಗೀಚಿದ ಘೋಷಣೆಗಳನ್ನು ತೋರಿಸುವ ಚಿತ್ರಗಳನ್ನು ಹಿಂದೂ ಅಮೆರಿಕನ್ ಫೌಂಡೇಶನ್ X ನಲ್ಲಿ (ಈ ಹಿಂದಿನ ಟ್ವಿಟ್ಟರ್‌) ನಲ್ಲಿ ಹಂಚಿಕೊಂಡಿದೆ.

ಈ  ಕುರಿತು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್ ಟ್ವೀಟ್‌ ಮಾಡಿದ್ದು, ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಎಸ್‌ಎಂವಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಭಾರತ ವಿರೋಧಿ ಗೀಚುಬರಹದ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘಟನೆಯು ಭಾರತೀಯ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ. ಈ ವಿಚಾರವಾಗಿ ಯುಎಸ್ ಅಧಿಕಾರಿಗಳಿಂದ ಕ್ರಮಕ್ಕಾಗಿ ನಾವು ಆಗ್ರಹಿಸಿದ್ದೇವೆ ಎಂದೂ ಪೋಸ್ಟ್‌ ಮಾಡಿದೆ.

Advertisement

Advertisement
Tags :
Advertisement