For the best experience, open
https://m.newskannada.com
on your mobile browser.
Advertisement

ಮಾಡೆಲ್ ತಾನಿಯಾ ಸಿಂಗ್ ಆತ್ಮಹತ್ಯೆ ಪ್ರಕರಣ: ಕ್ರಿಕೆಟಿಗನನ್ನು ವಿಚಾರಣೆಗೆ ಕರೆದ ಪೊಲೀಸರು

ಖ್ಯಾತ ಮಾಡೆಲ್ ತಾನಿಯಾ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ಆಟಗಾರ ಅಭಿಷೇಕ್ ಶರ್ಮಾಗೆ ಸೂರತ್ ಪೊಲೀಸರು ಸಮನ್ಸ್ ನೀಡಿದ್ದಾರೆ.
06:50 PM Feb 21, 2024 IST | Gayathri SG
ಮಾಡೆಲ್ ತಾನಿಯಾ ಸಿಂಗ್ ಆತ್ಮಹತ್ಯೆ ಪ್ರಕರಣ  ಕ್ರಿಕೆಟಿಗನನ್ನು ವಿಚಾರಣೆಗೆ ಕರೆದ ಪೊಲೀಸರು

ಖ್ಯಾತ ಮಾಡೆಲ್ ತಾನಿಯಾ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ಆಟಗಾರ ಅಭಿಷೇಕ್ ಶರ್ಮಾಗೆ ಸೂರತ್ ಪೊಲೀಸರು ಸಮನ್ಸ್ ನೀಡಿದ್ದಾರೆ.

Advertisement

ಗುಜರಾತ್‌ನ ಸೂರತ್‌ನಲ್ಲಿ ಫೆ. 19 ರಂದು 28 ವರ್ಷದ ತಾನಿಯಾ ಸಿಂಗ್ ಮಾಡೆಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಇದೀಗ ಅಭಿಷೇಕ್ ಶರ್ಮಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ.

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಅಭಿಷೇಕ್ ಶರ್ಮಾಗೆ ಆತ್ಮಹತ್ಯೆ ಮಾಡಿಕೊಂಡಿರುವ ತಾನಿಯಾ ಕೊನೆಯದಾಗಿ ಕರೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಅಭಿಷೇಕ್ ಅವರನ್ನು ಸೂರತ್ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗುತ್ತಿದೆ.

Advertisement

ಅಭಿಷೇಕ್ ಮತ್ತು ತಾನಿಯಾ ನಡುವಿನ ಸಂಬಂಧದ ಬಗ್ಗೆ ಮಾಹಿತಿ ಕಲೆಹಾಕುವ ಸಲುವಾಗಿ ಅಭಿಷೇಕ್​ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Tags :
Advertisement