ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಡೋದರಾ ದೋಣಿ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಖಾಸಗಿ ಶಾಲಾ ವಿದ್ಯಾರ್ಥಿಗಳ ಪ್ರವಾಸದಲ್ಲಿ ನಡೆದ ದುರಂತ ದೇಶವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿಗಳು ಶಾಲಾ ಶಿಕ್ಷಕರು ಸೇರಿ 27 ಮಂದಿಯಿಂದ ಬೋಟ್ ಗುಜರಾತ್‌ನ ವಡೋದರದ ಹರ್ನಿ ಸರೋವರದಲ್ಲಿ ಮಗುಚಿದೆ. ಈ ದುರಂತದಲ್ಲಿ 14 ವಿದ್ಯಾರ್ಥಿಗಳು ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ. ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, 10 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.
10:57 AM Jan 19, 2024 IST | Ashitha S

ವಡೋದರ: ಖಾಸಗಿ ಶಾಲಾ ವಿದ್ಯಾರ್ಥಿಗಳ ಪ್ರವಾಸದಲ್ಲಿ ನಡೆದ ದುರಂತ ದೇಶವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿಗಳು ಶಾಲಾ ಶಿಕ್ಷಕರು ಸೇರಿ 27 ಮಂದಿಯಿಂದ ಬೋಟ್ ಗುಜರಾತ್‌ನ ವಡೋದರದ ಹರ್ನಿ ಸರೋವರದಲ್ಲಿ ಮಗುಚಿದೆ. ಈ ದುರಂತದಲ್ಲಿ 14 ವಿದ್ಯಾರ್ಥಿಗಳು ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ. ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, 10 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.

Advertisement

ಈ ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲ ಸೂಕ್ತ ಚಿಕಿತ್ಸೆ ಹಾಗೂ ಮೃತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಎಲ್ಲಾ ನೆರವು ನೀಡುವಂತೆ ಗುಜರಾತ್ ಸರ್ಕಾರಕ್ಕೆ ಸೂಚಿಸಿದ್ದಾರೆ.

"ವಡೋದರದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೀರಾಪಾಲಾಗಿರುವ ಸುದ್ದಿ ತಿಳಿದಿ ತೀವ್ರ ಬೇಸರವಾಗಿದೆ. ಈ ದುಃಖದ ಸಂದರ್ಭದಲ್ಲಿ ನನ್ನ ಪಾರ್ಥನೆ ಮೃತ ವಿದ್ಯಾರ್ಥಿಗಳ ಕುಟುಂಬದೊಂದಿಗೆ ಇದೆ. ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ" ಎಂದು ಸಂತಾಪ ಸೂಚಿಸಿದ್ದಾರೆ. ಇನ್ನು ಸಂತ್ರಸ್ತರಿಗೆ ಸ್ಥಳೀಯ ಆಡಳಿತ ಎಲ್ಲಾ ನೆರವು ನೀಡುತ್ತಿದೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

Advertisement

Advertisement
Tags :
indiaLatestNewsNewsKannadaದೋಣಿ ದುರಂತನವದೆಹಲಿಪ್ರಧಾನಿ ನರೇಂದ್ರ ಮೋದಿಪ್ರಧಾನಿ ಮೋದಿಬೆಂಗಳೂರು
Advertisement
Next Article