ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭೂತಾನ್​ಗೆ ತೆರಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

ಪ್ರಧಾನಿ ಮೋದಿ ಇಂದು ದೆಹಲಿಯಿಂದ ಭೂತಾನ್​ಗೆ ತೆರಳಿದ್ದಾರೆ. ಪಾರೋ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಅವರ ಸಂಪುಟದ ಸಚಿವರು ಕೂಡ ಅಲ್ಲಿದ್ದರು. ಥಿಂಪುವಿನಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ ನಿರ್ಮಿಸಲಾದ ಅತ್ಯಾಧುನಿಕ ಆಸ್ಪತ್ರೆಯಾದ ಜಿಯಾಲ್ಟ್ಸುನ್ ಜೆಟ್ಸನ್ ಪೆಮಾ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.
11:29 AM Mar 22, 2024 IST | Ashitha S

ನವದೆಹಲಿ: ಪ್ರಧಾನಿ ಮೋದಿ ಇಂದು ದೆಹಲಿಯಿಂದ ಭೂತಾನ್​ಗೆ ತೆರಳಿದ್ದಾರೆ. ಪಾರೋ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಅವರ ಸಂಪುಟದ ಸಚಿವರು ಕೂಡ ಅಲ್ಲಿದ್ದರು. ಥಿಂಪುವಿನಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ ನಿರ್ಮಿಸಲಾದ ಅತ್ಯಾಧುನಿಕ ಆಸ್ಪತ್ರೆಯಾದ ಜಿಯಾಲ್ಟ್ಸುನ್ ಜೆಟ್ಸನ್ ಪೆಮಾ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

Advertisement

ಕಳೆದ ದಿನ ಮೋದಿ ಭೂತಾನ್​ಗೆ ಭೇಟಿ ನೀಡಬೇಕಿತ್ತು ಆದರೆ ಪ್ರತಿಕೂ ಹವಾಮಾನದಿಂದಾಗಿ ಒಂದು ದಿನ ತಡವಾಗಿ ತೆರಳಿದ್ದಾರೆ. ಭೂತಾನ್​ಗೆ ಭೇಟಿ ನೀಡುವ ಕುರಿತು ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ, ಭಾರತ-ಭೂತಾನ್ ಸಹಭಾಗಿತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. 2019ರಲ್ಲಿ ಕೊನೆಯ ಬಾರಿ ಅವರು ಭೂತಾನ್​ಗೆ ಭೇಟಿ ನೀಡಿದ್ದರು.

Advertisement

ತಮ್ಮ ಎರಡು ದಿನಗಳ ಭೇಟಿಯಲ್ಲಿ ಪ್ರಧಾನಿಯವರು ಭೂತಾನ್‌ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್, ಮಾಜಿ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರನ್ನು ಭೇಟಿಯಾಗಲಿದ್ದಾರೆ. ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರೊಂದಿಗೆ ಮೋದಿ ಚರ್ಚೆ ನಡೆಸಲಿದ್ದಾರೆ.

Advertisement
Tags :
BhutanBJPindiaLatestNewsNewsKannada
Advertisement
Next Article