For the best experience, open
https://m.newskannada.com
on your mobile browser.
Advertisement

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ.
11:20 AM May 20, 2024 IST | Ashitha S
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು  ಪ್ರಧಾನಿ ಮೋದಿ ಸಂತಾಪ

ತೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ.

Advertisement

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪತನದ ಬೆನ್ನಲ್ಲೇ ಇರಾನ್ ಅಧ್ಯಕ್ಷರ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದ ರಕ್ಷಣಾ ತಂಡಕ್ಕೆ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಏನಾಗಿದೆ ಎಂಬುದನ್ನು ಆರಂಭಿಕ ಹಂತದಲ್ಲಿ ತಿಳಿಯಲು ಕಷ್ಟಸಾಧ್ಯ ಎಂದು ನಿನ್ನೆ ಇರಾನ್‌ನ ಆಂತರಿಕ ಸಚಿವರು ಮಾಹಿತಿ ಹಂಚಿಕೊಂಡಿದ್ದರು.

ಇನ್ನು 'ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ರೈಸಿ ಅವರ ಕುಟುಂಬ ಮತ್ತು ಇರಾನ್ ಜನತೆಗೆ ನನ್ನ ಸಂತಾಪಗಳು. ಈ ದುಃಖದ ಸಮಯದಲ್ಲಿ ಭಾರತ ಇರಾನ್ ಜತೆಗಿದೆ' ಎಂದು ಪ್ರಧಾನಿ ಮೋದಿ ಅವರು ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದಾರೆ.

Advertisement

https://x.com/narendramodi/status/1792418659803038064

Advertisement
Tags :
Advertisement