For the best experience, open
https://m.newskannada.com
on your mobile browser.
Advertisement

ಮಿಚಾಂಗ್‌ ಚಂಡಮಾರುತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಮಿಚಾಂಗ್‌ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿಯವರು ಸಂತಾಪ ಸೂಚಿಸಿದ್ದಾರೆ.
04:10 PM Dec 06, 2023 IST | Ashitha S
ಮಿಚಾಂಗ್‌ ಚಂಡಮಾರುತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ದೆಹಲಿ: ಮಿಚಾಂಗ್‌ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿಯವರು ಸಂತಾಪ ಸೂಚಿಸಿದ್ದಾರೆ.

Advertisement

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ, ಮಿಚಾಂಗ್‌ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿನ ಕೆಲವು ಕುಟುಂಬಗಳು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡು ನೋವಿನಲ್ಲಿವೆ.

ಈ ಸಂದರ್ಭದಲ್ಲಿ ಆ ಕುಟುಂಬಗಳು ಧೈರ್ಯದಿಂದ ಇರಬೇಕು. ಈ ನಡುವೆ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲೇಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

Advertisement

Advertisement
Tags :
Advertisement