For the best experience, open
https://m.newskannada.com
on your mobile browser.
Advertisement

3 ಸೆಮಿಕಂಡಕ್ಟರ್ ಯೋಜನೆಗಳಿಗೆ ನರೇಂದ್ರ ಮೋದಿ ಶಂಕುಸ್ಥಾಪನೆ

ಪ್ರಧಾನಿ ಮೋದಿ ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸುಮಾರು ₹1.25 ಲಕ್ಷ ಕೋಟಿ ಮೌಲ್ಯದ ಮೂರು ಸೆಮಿಕಂಡಕ್ಟರ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
01:56 PM Mar 13, 2024 IST | Ashitha S
3 ಸೆಮಿಕಂಡಕ್ಟರ್ ಯೋಜನೆಗಳಿಗೆ ನರೇಂದ್ರ ಮೋದಿ ಶಂಕುಸ್ಥಾಪನೆ

ದೆಹಲಿ: ಪ್ರಧಾನಿ ಮೋದಿ ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸುಮಾರು ₹1.25 ಲಕ್ಷ ಕೋಟಿ ಮೌಲ್ಯದ ಮೂರು ಸೆಮಿಕಂಡಕ್ಟರ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

Advertisement

ಗುಜರಾತ್‌ನ ಧೋಲೇರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಸೌಲಭ್ಯ, ಅಸ್ಸಾಂನ ಮೊರಿಗಾಂವ್ ಮತ್ತು ಗುಜರಾತ್‌ನ ಸಾನಂದ್‌ನಲ್ಲಿ ಔಟ್ ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ ಸೌಲಭ್ಯ ಈ ಮೂರು ನಿರ್ಣಾಯಕ ಯೋಜನೆಗಳಿಗೆ ಮೋದಿ ಅಡಿಪಾಯ ಹಾಕಿದ್ದಾರೆ.

ಭಾರತವು ಪ್ರಮುಖ ಸೆಮಿಕಂಡಕ್ಟರ್ ಉತ್ಪಾದನಾ ಕೇಂದ್ರವಾಗಲು ಸಜ್ಜಾಗಿದೆ. ಮೂರು ಸೌಲಭ್ಯಗಳು ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುತ್ತವೆ ಎಂದು ಮೋದಿ ಸಮಾರಂಭದ ವಿಡಿಯೊವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

Advertisement

ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಗಾಗಿ ಭಾರತವನ್ನು ಪ್ರಮುಖ ಜಾಗತಿಕ ಕೇಂದ್ರವಾಗಿ ಇರಿಸುವ ಪ್ರಧಾನ ಮಂತ್ರಿಯವರ ದೃಷ್ಟಿಗೆ ಅನುಗುಣವಾಗಿ ಈ ಯೋಜನೆಗಳು ದೇಶದ ಯುವಕರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

https://twitter.com/i/broadcasts/1kvJpvdDzDwKE

Advertisement
Tags :
Advertisement