ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಕುಟುಂಬ ಭೇಟಿ ಮಾಡಿದ ಮೋದಿ

ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕೃತ ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರ ಕುಟುಂಬ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾದರು.
06:28 PM Feb 12, 2024 IST | Ashitha S

ದೆಹಲಿ: ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕೃತ ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರ ಕುಟುಂಬ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾದರು.

Advertisement

ಪ್ರಮುಖ ಸಮಾಜವಾದಿ ನಾಯಕನ ಕುಟುಂಬ ಸದಸ್ಯರು, ಅವರ ಪುತ್ರ ರಾಜ್ಯಸಭಾ ಸದಸ್ಯ ಮತ್ತು ಜೆಡಿಯು ನಾಯಕ ರಾಮ್ ನಾಥ್ ಠಾಕೂರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿಯನ್ನು ಅವರ 7, ಲೋಕ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. “ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಜನನಾಯಕ್ ಕರ್ಪೂರಿ ಠಾಕೂರ್ ಅವರ ಕುಟುಂಬದ ಸದಸ್ಯರನ್ನು ಭೇಟಿಯಾಗಲು ತುಂಬಾ ಸಂತೋಷವಾಗಿದೆ. ಕರ್ಪೂರಿ ಜಿ ಅವರು ಸಮಾಜದ ಹಿಂದುಳಿದ ಮತ್ತು ವಂಚಿತ ವರ್ಗಗಳ ಮಿಸಾಯ ಆಗಿದ್ದಾರೆ, ಅವರ ಜೀವನ ಮತ್ತು ಆದರ್ಶಗಳು ದೇಶವಾಸಿಗಳಿಗೆ ಸ್ಫೂರ್ತಿ ನೀಡುವುದು” ಎಂದು ಪ್ರಧಾನಿ ಹೇಳಿದರು.

ಇನ್ನು ರಾಮ್ ನಾಥ್ ಠಾಕೂರ್ ಅವರು ತಮ್ಮ ಕುಟುಂಬದ ಪರವಾಗಿ, ಬಿಹಾರದ ಪರವಾಗಿ ಮತ್ತು ದಮನಿತರು, ದಲಿತರು ಮತ್ತು ಹಿಂದುಳಿದ ಸಮುದಾಯಗಳ ಪರವಾಗಿ ಈ ಗೌರವಕ್ಕಾಗಿ ಪ್ರಧಾನಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.

Advertisement

ಎರಡನೇ ದೀಪಾವಳಿಯಂತೆಯೇ ಇದು ನಮಗೆ ಸಂತೋಷದ ಕ್ಷಣವಾಗಿತ್ತು. ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಮೊಮ್ಮಗ ರಂಜಿತ್‌ ಕುಮಾರ್‌ ಹೇಳಿದ್ದಾರೆ.

 

 

Advertisement
Tags :
Bharat ratnaKarpoori ThakurNARENDRA MODI
Advertisement
Next Article