For the best experience, open
https://m.newskannada.com
on your mobile browser.
Advertisement

ಅಯೋಧ್ಯೆಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ

ಬರೋಬ್ಬರಿ 500 ವರ್ಷಗಳ ಬಳಿಕ ಕೋಟ್ಯಾನುಕೋಟಿ ರಾಮಭಕ್ತರ ಕನಸು ನನಸಾಗಿದೆ. ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಕಾಣುವ ಕೋಟ್ಯಂತರ ಭಕ್ತರ ನೂರಾರು ವರ್ಷಗಳ ತಪಸ್ಸು ಕೊನೆಗೂ ಫಲ ಕೊಟ್ಟಿದೆ. ಸುಪ್ರೀಂಕೋರ್ಟ್ ಅನುಮತಿ ಮತ್ತು ಕೋಟ್ಯಂತರ ಭಾರತೀಯರ ತನು ಮನ ಧನದಿಂದ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ಕಾರ್ಯಕ್ರಮ ಇಂದು(ಜನವರಿ 22) ಜರುಗಿದೆ. 
12:40 PM Jan 22, 2024 IST | Ashitha S
ಅಯೋಧ್ಯೆಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಕೋಟ್ಯಾನುಕೋಟಿ ರಾಮಭಕ್ತರ ಕನಸು ನನಸಾಗಿದೆ. ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಕಾಣುವ ಕೋಟ್ಯಂತರ ಭಕ್ತರ ನೂರಾರು ವರ್ಷಗಳ ತಪಸ್ಸು ಕೊನೆಗೂ ಫಲ ಕೊಟ್ಟಿದೆ. ಸುಪ್ರೀಂಕೋರ್ಟ್ ಅನುಮತಿ ಮತ್ತು ಕೋಟ್ಯಂತರ ಭಾರತೀಯರ ತನು ಮನ ಧನದಿಂದ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ಕಾರ್ಯಕ್ರಮ ಇಂದು(ಜನವರಿ 22) ಜರುಗಿದೆ.

Advertisement

ಹೌದು. . ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವಿಜೃಂಭಣೆಯಿಂದ ನೆರವೇರಿದೆ. ರಾಮಜನ್ಮಭೂಮಿಯಲ್ಲಿ ರಾಮಲಲ್ಲಾ ಮೂರ್ತಿಯು ವಿರಾಜಮಾನವಾಗಿದ್ದು, ಪ್ರಾಣ ಪ್ರತಿಷ್ಠಾಪನೆಯ ಮೂಲಕ ಬಾಲರಾಮನ ಮೂರ್ತಿಯ ದರ್ಶನವಾಗಿದೆ.

Advertisement

ಈ ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾದು ಕುಳಿತಿದ್ದರು. ಇನ್ನು ಪ್ರಾಣ ಪ್ರತಿಷ್ಠೆಯ ಯಜಮಾನಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ವಹಿಸಿಕೊಂಡಿದ್ದರು. ಪ್ರಾಣ ಪ್ರತಿಷ್ಠೆಯ ಪೂಜಾ-ಕೈಂಕರ್ಯಗಳಲ್ಲಿ ಮೋದಿಯವರು ಭಾಗಿಯಾಗಿದ್ದರು.  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೇರವೇರಿದೆ.

Advertisement
Tags :
Advertisement