For the best experience, open
https://m.newskannada.com
on your mobile browser.
Advertisement

ಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್‌ ಶೋ ಮೂಲಕ ಚುನಾವಣ ಪ್ರಚಾರ

ರಾಜ್ಯದ ಲೋಕಸಭಾ ಚುನಾವಣೆ ಹಿನ್ನಲೆ ನರೇಂದ್ರ ಮೋದಿ ಅವರು ಇಂದು ಮಂಗಳೂರಿನಲ್ಲಿ ಭರ್ಜರಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್​ಶೋ ನಡೆಸಲಿದ್ದಾರೆ.
08:21 PM Apr 14, 2024 IST | Nisarga K
ಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್‌ ಶೋ ಮೂಲಕ  ಚುನಾವಣ ಪ್ರಚಾರ
ಮಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್‌ ಶೋ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಹಿನ್ನಲೆ ನರೇಂದ್ರ ಮೋದಿ ಅವರು ಇಂದು ಮಂಗಳೂರಿನಲ್ಲಿ ಭರ್ಜರಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್​ಶೋ ನಡೆಸಲಿದ್ದಾರೆ. ಎಡಿಜಿಪಿ ಚಂದ್ರಶೇಖರ್, ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಅಂತಿಮ ಹಂತದ ಭದ್ರತೆ ಪರಿಶೀಲಿಸಲಾಗಿದೆ. ಉತ್ಸಾಹದಿಂದ ಮೋದಿಗಾಗಿ ಲಾಲ್​ಬಾಗ್ ಜಂಕ್ಷನ್​ನಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದಾರೆ.

Advertisement

Advertisement
Tags :
Advertisement