ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯುವಕರು, ಮಹಿಳೆಯರು, ರೈತರ ಬಗ್ಗೆ ಗಮನಹರಿಸಿರುವಂತೆ ಮೋದಿ ಸಲಹೆ

'ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಾಗಿದೆ' ಎಂದು ಪ್ರಧಾನಿ ಮೋದಿ ಬಿಜೆಪಿ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
07:28 PM Dec 23, 2023 IST | Ashitha S

ನವದೆಹಲಿ: "ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಾಗಿದೆ" ಎಂದು ಪ್ರಧಾನಿ ಮೋದಿ ಬಿಜೆಪಿ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

Advertisement

ಮುಂಬರುವ ಲೋಕಸಭೆ ಚುನಾವಣೆಯ ಸಿದ್ಧತೆ ಮತ್ತು ಕಾರ್ಯಕ್ರಮಗಳ ರೂಪುರೇಷೆಗಾಗಿ ದೆಹಲಿಯಲ್ಲಿ ಶುಕ್ರವಾರ ಆರಂಭವಾದ ಎರಡು ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿಯ ಮಹತ್ವದ ಸಭೆಯು ಶುಕ್ರವಾರ 5 ಗಂಟೆಗಳಿಗೂ ಹೆಚ್ಚು ಕಾಲ ನಡೆಯಿತು.

ನಮ್ಮ ಯೋಜನೆಗಳು ಬಡವರಿಗೆ, ಯುವಕರಿಗೆ, ರೈತರಿಗೆ, ಮಹಿಳೆಯರಿಗೆ ಸರಿಯಾಗಿ ತಲುಪಿದರೆ ಚುನಾವಣೆಯಲ್ಲಿ ನಮಗೆ ಹೆಚ್ಚು ಮತಗಳು ದೊರೆಯಲು ಸಹಕಾರಿಯಾಗುತ್ತದೆ. ಇದಕ್ಕಾಗಿ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ನಡೆಯುತ್ತಿರುವ ರಾಜ್ಯಗಳತ್ತ ಗಮನ ಹರಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಕೇಂದ್ರ ಸರ್ಕಾರದ ಕಳಪೆ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಧ್ಯವಾದಷ್ಟು ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದು ಮೋದಿ ಸಲಹೆ ನೀಡಿದರು. ಅಲ್ಲದೆ ನಾವು ಈಗ ಮಿಷನ್ ಮೋಡ್‌ನಲ್ಲಿ ಕೆಲಸ ಮಾಡಬೇಕಾಗಿದೆ ಎಂದ ಮೋದಿ, ಚುನಾವಣೆ ತಯಾರಿಯನ್ನು ಇನ್ನಷ್ಟು ತ್ವರಿತಗೊಳಿಸುವಂತೆ ಸೂಚನೆ ನೀಡಿದರು.

Advertisement

 

 

Advertisement
Tags :
BJPFARMERSFocusGOVERNMENTindiaKARNATAKALatestNewsNewsKannadaPM MODIPoorwomenYOUTHನವದೆಹಲಿಪ್ರಧಾನಿ ನರೇಂದ್ರ ಮೋದಿ
Advertisement
Next Article