For the best experience, open
https://m.newskannada.com
on your mobile browser.
Advertisement

ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ ಬೆಳವಣಿಗೆಯ ಬಗ್ಗೆ ಯೋಚಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
04:30 PM May 07, 2024 IST | Ashitha S
ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ  ಪ್ರಧಾನಿ ಮೋದಿ

ವದೆಹಲಿ: ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ ಬೆಳವಣಿಗೆಯ ಬಗ್ಗೆ ಯೋಚಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Advertisement

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, ಭಾರತೀಯ ಜನತಾ ಪಕ್ಷವು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ.

ಕೆಲ ದಿನಗಳ ಹಿಂದೆ ಮೋದಿ ಅವರು ಮುಸಲಾನರನ್ನು ನುಸುಳುಕೋರರು ಎಂದು ಆರೋಪಿಸಿದ ನಂತರ ಅವರನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸಲಾಗಿತ್ತು. ಹೀಗಾಗಿ ಅವರು ನಾನು ಎಂದಿಗೂ ಮುಸ್ಲಿಂ ವಿರೋಧಿಯಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

Advertisement

ಕಾಂಗ್ರೆಸ್‌‍ನವರು ನೆಹರೂ ಕಾಲದಿಂದಲೂ ನಮನ್ನು ಮುಸ್ಲಿಂ ವಿರೋಧಿ ಎಂದು ನಿಂದಿಸುತ್ತಿದ್ದಾರೆ. ಹಾಗೂ ತಮನ್ನು ಮುಸ್ಲಿಂ ಸ್ನೇಹಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಏಕೆಂದರೆ ಅವರು ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದಾರೆ ಎಂದು ಮೋದಿ ಆರೋಪಿಸಿದರು ಅದಕ್ಕಾಗಿಯೇ ಅವರು ಈ ಭಯದ ವಾತಾವರಣವನ್ನು ಸಷ್ಟಿಸಿದರು.

Advertisement
Tags :
Advertisement