ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

12 ರಾಜ್ಯದ ಸಿಎಂಗಳ ಸಮ್ಮುಖದಲ್ಲಿ ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈ ವೇಳೆ ಬಿಜೆಪಿ ಆಡಳಿತವಿರುವ 12 ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿರುವ ನಿರೀಕ್ಷೆಯಿದೆ ಎಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.
09:57 AM May 14, 2024 IST | Ashitha S

ವಾರಣಾಸಿ: ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈ ವೇಳೆ ಬಿಜೆಪಿ ಆಡಳಿತವಿರುವ 12 ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿರುವ ನಿರೀಕ್ಷೆಯಿದೆ ಎಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

Advertisement

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಕೇಂದ್ರ ಸಚಿವರು ಮತ್ತು ವಿವಿಧ ಎನ್‌ಡಿಎ ಮಿತ್ರಪಕ್ಷಗಳ ಅಧ್ಯಕ್ಷರು ಈ ಸಂದರ್ಭದಲ್ಲಿ ಉಪಸ್ಥಿತರಿರುವ ಸಾಧ್ಯತೆಯಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಛತ್ತೀಸ್‌ಗಢದ ಸಿಎಂ ವಿಷ್ಣು ದೇವ್ ಸಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ನಾಮನಿರ್ದೇಶನದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಿಕ್ಕಿಂ ಸಿಎಂ ಪ್ರೇಮ್ ಸಿಂಗ್ ತಮಾಂಗ್ ಮತ್ತು ತ್ರಿಪುರದ ಮುಖ್ಯಮಂತ್ರಿ ಮಾಣಿಕ್ ಸಹಾ ಕೂಡ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ

Advertisement

Advertisement
Tags :
CongressGOVERNMENTindiaKARNATAKALatestNewsನವದೆಹಲಿಪ್ರಧಾನಿ ನರೇಂದ್ರ ಮೋದಿ
Advertisement
Next Article