ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ 5.30ಕ್ಕೆ ಭಾಷಣ!

ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಸಂಜೆ 5.30ಕ್ಕೆ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ಮೂಲಗಳ ಪ್ರಕಾರ ಇಂದು ರಾತ್ರಿಯಿಂದಲೇ ಬಹುನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
05:27 PM Mar 11, 2024 IST | Ashitha S

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಸಂಜೆ 5.30ಕ್ಕೆ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ಮೂಲಗಳ ಪ್ರಕಾರ ಇಂದು ರಾತ್ರಿಯಿಂದಲೇ ಬಹುನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Advertisement

ಪೌರತ್ವ ತಿದ್ದುಪಡಿ ಕಾಯ್ದೆ (CAA) 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಭಾರತದಲ್ಲಿ ನೆಲೆಸಿದ ಮತ್ತು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳವನ್ನು ಎದುರಿಸುತ್ತಿರುವ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡಲು ಪ್ರಯತ್ನಿಸುತ್ತದೆ.

ಪೌರತ್ವ (ತಿದ್ದುಪಡಿ) ಮಸೂದೆ 2019, 1955ರಲ್ಲಿ ಜಾರಿಗೆ ತರಲಾಗಿದ್ದ ನಾಗರಿಕ ಕಾಯ್ದೆಗೆ ತಿದ್ದುಪಡಿಯಾಗಿದೆ. ಮುಸ್ಲಿಂ ಧರ್ಮೀಯರು ಬಹುಸಂಖ್ಯೆಯಲ್ಲಿರುವ ನಮ್ಮ ನೆರೆಯ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನಗಳ ಮುಸ್ಲಿಂಯೇತರ ನಿರಾಶ್ರಿತರಿಗೆ, ಅಲ್ಲಿ ಧಾರ್ಮಿಕ ಹಿಂಸೆ ಮತ್ತು ಕಿರುಕುಳಕ್ಕೆ ಒಳಗಾಗಿ ಜೀವನ ನಡೆಸಲು ಸಾಧ್ಯವಾಗದೆ ಭಾರತಕ್ಕೆ ಆಶ್ರಯ ಕಂಡುಕೊಂಡು ಬಂದಿರುವ ನಾಗರಿಕರಿಗೆ ಭಾರತದ ಪೌರತ್ವ ನೀಡುವ ಮಸೂದೆಯಾಗಿದೆ.

Advertisement

ಒಂದು ಬಾರಿ ಈ ತಿದ್ದುಪಡಿ ವಿದೇಯಕ ಜಾರಿಗೆ ಬಂದರೆ ಈ ಮೂರೂ ದೇಶಗಳ ಹಿಂದೂ, ಸಿಖ್, ಕ್ರೈಸ್ತ, ಬೌದ್ಧ, ಜೈನ ಮತ್ತು ಪಾರ್ಸಿ ಸಮುದಾಯದ ವಲಸಿಗರಿಗೆ ಭಾರತದ ಪೌರತ್ವ ಸಿಗುತ್ತದೆ. ಅವರು ಅಕ್ರಮ ವಲಸಿಗರು ಎಂದು ನಂತರ ಪರಿಗಣಿಸಲಾಗುವುದಿಲ್ಲ.

ಭಾರತದ ಪೌರತ್ವ ಸಹಜವಾಗಿ ಪಡೆಯಲು ಈ ಮೂರೂ ದೇಶಗಳ 6 ಧರ್ಮಗಳ ವಲಸಿಗರು ಅರ್ಹರಾಗಿರುತ್ತಾರೆ.

ಸಹಜವಾಗಿ ಭಾರತದ ಪೌರತ್ವ ಗಳಿಸಲು ಬೇಕಾದ ಮುಖ್ಯ ಅರ್ಹತೆಯೆಂದರೆ ವಲಸಿಗ ಕಳೆದ 12 ತಿಂಗಳಿನಿಂದ ಭಾರತದಲ್ಲಿ ನೆಲೆಸಿರಬೇಕು. ಮತ್ತು ಈ ಹಿಂದಿನ 14 ವರ್ಷಗಳಲ್ಲಿ ಅವರು ಭಾರತದಲ್ಲಿ 11 ವರ್ಷ ನೆಲೆಸಿರಬೇಕಾಗುತ್ತದೆ. ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಈ ಮೂರು ದೇಶಗಳ ಆರು ಧರ್ಮೀಯರಿಗೆ ಮಾತ್ರ 11 ವರ್ಷಗಳ ಬದಲು 6 ವರ್ಷಗಳ ಕಾಲ ಭಾರತದಲ್ಲಿ ನೆಲೆಸಿದ್ದರೆ ಇಲ್ಲಿನ ಪೌರತ್ವ ಸಿಗುತ್ತದೆ.

Advertisement
Tags :
indiaKARNATAKALatestNewsNewsKannada
Advertisement
Next Article