ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫೆ. 20ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಆರ್ಟಿಕಲ್ 370 ಅನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಫೆಬ್ರವರಿ 20 ರಂದು ಜಮ್ಮು ಮತ್ತು ಕಾಶ್ಮೀರ ಕ್ಕೆ ಭೇಟಿ ನೀಡಲಿದ್ದಾರೆ.
12:06 PM Feb 19, 2024 IST | Ashitha S

ದೆಹಲಿ: ಆರ್ಟಿಕಲ್ 370 ಅನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಫೆಬ್ರವರಿ 20 ರಂದು ಜಮ್ಮು ಮತ್ತು ಕಾಶ್ಮೀರ ಕ್ಕೆ ಭೇಟಿ ನೀಡಲಿದ್ದಾರೆ.

Advertisement

ಈ ಅವಧಿಯಲ್ಲಿ ಪ್ರಧಾನಿ ಮೋದಿ ಅವರು 3,161 ಕೋಟಿ ರೂಪಾಯಿ ಮೌಲ್ಯದ 209 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿಯವರ ಕಾಶ್ಮೀರ ಪ್ರವಾಸ ಈಗ ಪಾಕಿಸ್ತಾನದಲ್ಲೂ ಚರ್ಚೆಯಾಗುತ್ತಿದೆ.

ಚುನಾವಣಾ ನೀತಿ ಸಂಹಿತೆ ಪ್ರಾರಂಭವಾಗುವ ಮೊದಲು ಪ್ರಧಾನಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಬೇಕೆಂದು ನಾವು ಬಯಸಿದ್ದೇವೆ ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದರು.

Advertisement

ಇನ್ನು ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಸಾಂಬಾದ ವಿಜಯಪುರದಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್), ರಿಯಾಸಿ ಜಿಲ್ಲೆಯ ಚೆನಾಬ್ ಮೇಲಿನ ಅತಿ ಎತ್ತರದ ರೈಲ್ವೆ ಸೇತುವೆ, ಉಧಂಪುರದಲ್ಲಿ ದೇವಿಕಾ ಯೋಜನೆ, ಐಐಎಂ ಜಮ್ಮು ಮತ್ತು ಶಹಪುರ್-ಕಂಡಿ ಅಣೆಕಟ್ಟು ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

ಜಮ್ಮು ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ 13,375 ಕೋಟಿ ರೂಪಾಯಿ ಮೌಲ್ಯದ ಹಲವಾರು ಯೋಜನೆಗಳ ಉದ್ಘಾಟನೆ ಮಾಡಿ ದೇಶಕ್ಕೆ ಸಮರ್ಪಿಸಲಿದ್ದಾರೆ.

 

 

Advertisement
Tags :
GOVERNMENTindiaLatestNewsNewsKannadaಜಮ್ಮುನವದೆಹಲಿಪ್ರಧಾನಿ ನರೇಂದ್ರ ಮೋದಿಬೆಂಗಳೂರು
Advertisement
Next Article