For the best experience, open
https://m.newskannada.com
on your mobile browser.
Advertisement

2-3 ವರ್ಷಗಳಲ್ಲಿ ಮೋದಿ ಹತ್ಯೆಯಾಗುತ್ತದೆ ಎಂದ ಪ್ರತಿಭಟನಾ ನಿರತ ವ್ಯಕ್ತಿ !

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ರೈತರ ಪ್ರತಿಭಟನೆ ಒಂದಿಲ್ಲೊಂದು ಕಾರಣಕ್ಕೆ ವಿವಾದಕ್ಕೀಡಾಗುತ್ತಿದ್ದು, ಇದೀಗ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವ ವಿಚಾರವಾಗಿ ಸದ್ದು ಮಾಡುತ್ತಿದೆ.
01:35 PM Feb 18, 2024 IST | Ashitha S
2 3 ವರ್ಷಗಳಲ್ಲಿ ಮೋದಿ ಹತ್ಯೆಯಾಗುತ್ತದೆ ಎಂದ ಪ್ರತಿಭಟನಾ ನಿರತ ವ್ಯಕ್ತಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ರೈತರ ಪ್ರತಿಭಟನೆ ಒಂದಿಲ್ಲೊಂದು ಕಾರಣಕ್ಕೆ ವಿವಾದಕ್ಕೀಡಾಗುತ್ತಿದ್ದು, ಇದೀಗ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವ ವಿಚಾರವಾಗಿ ಸದ್ದು ಮಾಡುತ್ತಿದೆ.

Advertisement

ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತನೋರ್ವ ಮುಂದಿನ 2-3 ವರ್ಷದೊಳಗೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಯಾಗುತ್ತದೆ ಎಂದು ಹೇಳಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಕೆಲವು ವಿಚಾರಗಳನ್ನು ನಾವು ಎಲ್ಲಿಯವರೆಗೂ ಸಹಿಸಿಕೊಳ್ಳುತ್ತೇವೋ ಅಲ್ಲಿಯವರೆಗೂ ಏನು ಆಗುವುದಿಲ್ಲ ಎಂದು ಹೇಳುತ್ತಿರುವುದನ್ನು ವೈರ​ಲ್ ವಿಡಿಯೋದಲ್ಲಿ ನೋಡಬಹುದಾಗಿದೆ. ಇನ್ನು ಮೋದಿ ಅವರ ಹತ್ಯೆ ಕುರಿತು ಹೇಳಿಕೆ ನೀಡಿದ್ದು, ಸರ್ಕಾರ ಕ್ರಮಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಿದೆ.

Advertisement

Advertisement
Tags :
Advertisement