For the best experience, open
https://m.newskannada.com
on your mobile browser.
Advertisement

ಚೇತರಿಕೆಯ ಫೋಟೊ ಹಂಚಿಕೊಂಡ ಕ್ರಿಕೆಟರ್ ಮೊಹಮ್ಮದ್ ಶಮಿ

ಕಳೆದ ತಿಂಗಳು ಲಂಡನ್​ನಲ್ಲಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಟೀಮ್​ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ  ಅವರು ಚೇತರಿಸಿಕೊಳ್ಳುತ್ತಿರುವ ಫೋಟೊವನ್ನು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
05:28 PM Mar 24, 2024 IST | Ashika S
ಚೇತರಿಕೆಯ ಫೋಟೊ ಹಂಚಿಕೊಂಡ ಕ್ರಿಕೆಟರ್ ಮೊಹಮ್ಮದ್ ಶಮಿ

ಲಕ್ನೋ: ಕಳೆದ ತಿಂಗಳು ಲಂಡನ್​ನಲ್ಲಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಟೀಮ್​ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ  ಅವರು ಚೇತರಿಸಿಕೊಳ್ಳುತ್ತಿರುವ ಫೋಟೊವನ್ನು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Advertisement

ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್(IPL 2024)ನಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್​ ಮಸಾಜ್​ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡವೂ ಗಾಯಗೊಂಡು ಐಪಿಎಲ್​ ಟೂರ್ನಿಯಿಂದ ಹೊರಬಿದ್ದಿರುವ ಮೊಹಮ್ಮದ್ ಶಮಿ ಬದಲಿಗೆ ಕೇರಳ ಮೂಲಕ ವೇಗದ ಬೌಲರ್ ಸಂದೀಪ್ ವಾರಿಯರ್  ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿಕೊಂಡಿದೆ.

Advertisement

ಶಮಿ ಗಾಯದ ಬಗ್ಗೆ ಮಾಹಿತಿ ಕಳೆದ ವಾರ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಮಾಹಿತಿ ನೀಡಿದ್ದರು. ‘ಶಮಿ ಅವರಿಗೆ ಶಸ್ತ್ರಚಿಕಿತ್ಸೆ ಮುಗಿದಿದೆ. ಅವರು ಭಾರತಕ್ಕೆ ವಾಪಸಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಿದೆ‘ ಹೇಳಿದ್ದರು.

Advertisement
Tags :
Advertisement