For the best experience, open
https://m.newskannada.com
on your mobile browser.
Advertisement

ಉಡುಪಿಗೂ ಕಾಲಿಟ್ಟ ಮಂಗನ ಕಾಯಿಲೆ: ಮೊದಲ ಪ್ರಕರಣ ದಾಖಲು

ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್‌ ಬಂದಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ.
02:13 PM Feb 24, 2024 IST | Gayathri SG
ಉಡುಪಿಗೂ ಕಾಲಿಟ್ಟ ಮಂಗನ ಕಾಯಿಲೆ  ಮೊದಲ ಪ್ರಕರಣ ದಾಖಲು

ಉಡುಪಿ: ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್‌ ಬಂದಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ.

Advertisement

ಈವರೆಗೆ 117 ಮಂದಿಗೆ ಪಾಸಿಟಿವ್ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಎಫ್ಟಿ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಜಿಲ್ಲೆಯಲ್ಲಿ ಒಂದು ಪ್ರಕರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಐ. ಗಡಾದ್ ಮಾಹಿತಿ ನೀಡಿದ್ದಾರೆ.

Advertisement

Advertisement
Tags :
Advertisement