For the best experience, open
https://m.newskannada.com
on your mobile browser.
Advertisement

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಪ್ರಾರಂಭ

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
04:47 PM May 16, 2024 IST | Chaitra Kulal
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಪ್ರಾರಂಭ

ಬೆಂಗಳೂರು: ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

ಮೇ 19ರಂದು ನೈಋತ್ಯ ಮುಂಗಾರು ಮಾರುತವು ದಕ್ಷಿಣ ಅಂಡಮಾನ್, ಬಂಗಾಳಕೊಲ್ಲಿಯ ಆಗ್ನೇಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ.

ಮೇ 31ಕ್ಕೆ ಮೊದಲಿಗೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ದಿನಾಂಕದಿಂದ ಮೂರ್ನಾಲ್ಕು ದಿನ ಮುಂಚಿತವಾಗಿಯೂ ಅಥವಾ ನಂತರ ಮುಂಗಾರು ಬರುವ ಸಾಧ್ಯತೆಯಿದೆ.

Advertisement

ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಎಂಟ್ರಿ ಕೊಡಲಿದೆ. ಜೂನ್ 7 ಅಥವಾ 8 ರಂದು ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಹವಾಮಾನ ತಜ್ಞರು  ತಿಳಿಸಿದ್ದಾರೆ.

Advertisement
Tags :
Advertisement