ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಾಯವ್ಯ ಚೀನಾದಲ್ಲಿ ಭೂಕಂಪ: 100ಕ್ಕೂ ಹೆಚ್ಚು ಮಂದಿ ಸಾವು

ವಾಯವ್ಯ ಚೀನಾದ  ಹಲವೆಡೆ ಸಂಭವಿಸಿದ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟು ದಾಖಲಾಗಿದೆ. ಭೂಕಂಪವು ಸುಮಾರು 10 ಕಿಲೋಮೀಟರ್ ಆಳದಲ್ಲಿ ಕೇಂದ್ರಿತವಾಗಿತ್ತು ಎಂದು ಹೇಳಲಾಗಿದೆ.
07:00 AM Dec 19, 2023 IST | Ashika S

ಬೀಜಿಂಗ್: ವಾಯವ್ಯ ಚೀನಾದ  ಹಲವೆಡೆ ಸಂಭವಿಸಿದ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟು ದಾಖಲಾಗಿದೆ. ಭೂಕಂಪವು ಸುಮಾರು 10 ಕಿಲೋಮೀಟರ್ ಆಳದಲ್ಲಿ ಕೇಂದ್ರಿತವಾಗಿತ್ತು ಎಂದು ಹೇಳಲಾಗಿದೆ.

Advertisement

ವಾಯವ್ಯ ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ. ದುರಂತದಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ‘ಕ್ಸಿನ್ಹುವಾ’ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ‘ಎಪಿ’ ವರದಿ ಮಾಡಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಭೂಕಂಪದಿಂದ ಹತ್ತಾರು ಕಟ್ಟಡಗಳು ನಾಶವಾಗಿವೆ. ಸದ್ಯ ಅವಶೇಷಗಡಳಡಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.

Advertisement

ರಕ್ಷಣಾ ಕಾರ್ಯಾಚರಣೆಗೆ ಅಧ್ಯಕ್ಷ ಜಿನ್‌ಪಿಂಗ್ ನಿರ್ದೇಶನ:  ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೂಕಂಪದ ನಂತರ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಮುಖ ನಿರ್ದೇಶನಗಳನ್ನು ನೀಡಿದರು. ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು, ಪೀಡಿತ ಜನರ ಪುನರ್ವಸತಿ ಮತ್ತು ಜನರ ಜೀವನ ಮತ್ತು ಆಸ್ತಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಗರಿಷ್ಠ ಪ್ರಯತ್ನಗಳನ್ನು ನಡೆಲಾಗುತ್ತಿದೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ‘ಗ್ಲೋಬಲ್ ಟೈಮ್ಸ್’ ವರದಿ ಮಾಡಿದೆ.

 

Advertisement
Tags :
LatetsNewsNewsKannadaಕೇಂದ್ರಿತಭೂಕಂಪರಿಕ್ಟರ್ ಮಾಪಕವಾಯವ್ಯ ಚೀನಾ
Advertisement
Next Article