ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮದುವೆ ಊಟ ಸೇವಿಸಿ 1೦೦ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು

ಮದುವೆಯಲ್ಲಿ ಊಟ ಮಾಡಿ ನೂರಾರು ಜನರು ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.
12:37 PM Apr 26, 2024 IST | Chaitra Kulal

ಕೊಡಗು: ಮದುವೆಯಲ್ಲಿ ಊಟ ಮಾಡಿ ನೂರಾರು ಜನರು ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

Advertisement

ಘಟನೆಯಿಂದ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಮಧ್ಯಾಹ್ನ  ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದು, ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ.

ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ಭೇಟಿ ನೀಡಿದ್ದು, ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Tags :
HOSPITAlLatestNewsMARRIAGENewsKarnatakaunwellಕೊಡಗು
Advertisement
Next Article