ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
07:58 AM Dec 26, 2023 IST | Ramya Bolantoor

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 31 ರಿಂದ ಮಳೆಯಾಗುತ್ತೆ ಎಂದು ತಿಳಿಸಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ ಎಂದು ತಿಳಿಸಿದೆ.  ಎಚ್​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Advertisement

 

 

 

Advertisement
Tags :
KARNATAKALatestNewsNewsKannadaRAINFALLಬೆಂಗಳೂರು
Advertisement
Next Article