ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇರಳ, ಕರ್ನಾಟಕ ಮೂಲದ ಮೋಸ್ಟ್‌ ವಾಂಟೆಡ್‌ ನಕ್ಸಲರು ಅಂದರ್

ಕೇರಳ ಹಾಗೂ ಕರ್ನಾಟಕ, ತಮಿಳುನಾಡಿನಲ್ಲಿ ಮೋಸ್ಟ್‌ ವಾಂಟೆಡ್‌ ಆಗಿದ್ದ ನಕ್ಸಲರನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ದೊರೆತಿದೆ.
12:48 PM Nov 08, 2023 IST | Ramya Bolantoor

ಕೊಚ್ಚಿ: ಕೇರಳ ಹಾಗೂ ಕರ್ನಾಟಕ, ತಮಿಳುನಾಡಿನಲ್ಲಿ ಮೋಸ್ಟ್‌ ವಾಂಟೆಡ್‌ ಆಗಿದ್ದ ನಕ್ಸಲರನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಶೃಂಗೇರಿ ಮೂಲದ ಶ್ರೀಮತಿ ಅಲಿಯಾಸ್‌ ಉನ್ನಿಮಾಯಾ ಹಾಗೂ ಕೇರಳ ಮೂಲದ ಚಂದ್ರು ಅಲಿಯಾಸ್‌ ತಿರುವೆಂದಿಗಂ ಅವರನ್ನು ಕೇರಳ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.‌

Advertisement

ತಳಪ್ಪುಳ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯಾ ಪ್ರದೇಶದಲ್ಲಿ ಕೇರಳ ಪೊಲೀಸರ ವಿಶೇಷ ತಂಡಗಳು ಮತ್ತು ನಕ್ಸಲರ ನಡುವೆ ಚಕಮಕಿ ನಡೆದಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಐವರು ನಕ್ಸಲರ ಗುಂಪು ತಮ್ಮ ಮೊಬೈಲ್ ಫೋನ್‌ಗಳನ್ನು ಚಾರ್ಜ್ ಮಾಡಲು ಮನೆಯೊಂದರಲ್ಲಿ ಆಶ್ರಯ ಪಡೆದಾಗ ಈ ಘಟನೆ ಸಂಭವಿಸಿದೆ. ಕಾರ್ಯಾಚರಣೆಯ ಸಂದರ್ಭದಲ್ಲಿ ಮೂವರು ನಕ್ಸಲರು ತಪ್ಪಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಚಂದ್ರು, ಹಾಗೂ ಶ್ರೀಮತಿ ಅವರನ್ನು ಬಂಧಿಸಲಾಗಿದೆ. ಈ ಹಿಂದೆ ಶೃಂಗೇರಿ ಮೂಲದ ನಕ್ಸಲ್‌ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳದ ಸುಲ್ತಾನ್‌ ಬತ್ತೇರಿ ಸಮೀಪ ಬಂಧಿಸಿದ್ದರು ಎಂಬುದನ್ನು ನೆನಪಿಸಿಕೊಳ್ಳಬಹುದು.

Advertisement
Advertisement
Tags :
ARRESTBreakingNewsKARNATAKAKeralaLatestNewsLatetsNewsNewsKannada
Advertisement
Next Article