For the best experience, open
https://m.newskannada.com
on your mobile browser.
Advertisement

ಮೋಸ್ಟ್ ವಾಂಟೆಡ್ ಟೆರರ್‌ ದಾವೂದ್‌ ಇಬ್ರಾಹಿಂಗೆ ವಿಷಪ್ರಾಷನ

ಪಾಕಿಸ್ತಾನದಲ್ಲಿ ನಿಗೂಢವಾಗಿ ಭಾರತಕ್ಕೆ ಬೇಕಾದ ಹಲವು ಉಗ್ರಕ್ರಿಮಿಗಳು ಸಾವನ್ನಪ್ಪುತ್ತಿದ್ದಾರೆ. ಇದೀಗ ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾನೆ.
07:13 AM Dec 18, 2023 IST | Ashika S
ಮೋಸ್ಟ್ ವಾಂಟೆಡ್ ಟೆರರ್‌ ದಾವೂದ್‌ ಇಬ್ರಾಹಿಂಗೆ ವಿಷಪ್ರಾಷನ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಿಗೂಢವಾಗಿ ಭಾರತಕ್ಕೆ ಬೇಕಾದ ಹಲವು ಉಗ್ರಕ್ರಿಮಿಗಳು ಸಾವನ್ನಪ್ಪುತ್ತಿದ್ದಾರೆ. ಇದೀಗ ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾನೆ.

Advertisement

ವಿಷಪ್ರಾಶಾನದ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ ಎಂದು ವರದಿಯಾಗಿದೆ. ಆಸ್ಪತ್ರೆಗೆ ದಾಖಲಾಗಿ ಇಂದಿಗೆ ಎರಡು ದಿನಗಳಾಗಿದ್ದು, ಮಹಡಿಯೊಂದರಲ್ಲಿ ಇದ್ದ ರೋಗಿಗಳನ್ನು ಬೇರೆಡೆಗೆ ಶಿಫ್ಟ್ ಮಾಡಿ ಈನಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.

ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶ ನೀಡಲಾಗುತ್ತಿದೆ. ಮುಂಬೈ ಪೊಲೀಸರು ಭೂಗತ ಪಾತಕಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

Advertisement

Advertisement
Tags :
Advertisement