ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟ ಘಟನೆ: ಲೋಕಾದಿಂದ ಸ್ವಯಂಪ್ರೇರಿತ ಪ್ರಕರಣ

ಬೆಂಗಳೂರಿನ ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
02:18 PM Nov 22, 2023 IST | Ashika S

ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

Advertisement

ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆಆರ್​ ಸರ್ಕಲ್ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಏಳು ಜನ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಪ್ರಕರಣ ಸಂಬಂಧ ಎರಡು ವಾರದಲ್ಲಿ ಸಂಪೂರ್ಣ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆಆರ್​ ಸರ್ಕಲ್​ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ಉತ್ತರ ವಿಭಾಗದ ಮುಖ್ಯ ಅಭಿಯಂತರ, ಬೆಸ್ಕಾಂ ಪೂರ್ವ ವೃತ್ತದ ಮೇಲ್ವಿಚಾರಕ ಅಭಿಯಂತರ, ಕಾರ್ಯನಿರ್ವಾಹಕ ಅಭಿಯಂತರ ವೈಟ್​ಫಿಲ್ಡ್​ ವಿಭಾಗ, ಹೋಫ್​ ಫಾರಂ ಸಿಗ್ನಲ್​​ ವೈಟ್​​ಫಿಲ್ಡ್​ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮತ್ತು ಹೋಫ್​ ಫಾರಂ ಸಿಗ್ನಲ್​​ ವೈಟ್​​ಫಿಲ್ಡ್​​ನ ಸಹಾಯಕ ಅಭಿಯಂತರ ವಿರುದ್ಧ ವಿರುದ್ಧ ಸೆಕ್ಷನ್ 7(1)(B) ಆಫ್ ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಮಾಲ್ ಅಡ್ಮಿನಿಸ್ಟ್ರೇಷನ್ 2(10) ಅಡಿಯಲ್ಲಿ ಕೇಸ್ ದಾಖಲಾಗಿದೆ.

Advertisement

Advertisement
Tags :
LatetsNewsNewsKannadaತಾಯಿಪ್ರಕರಣಮಗುಮೃತವಿದ್ಯುತ್ ತಂತಿ
Advertisement
Next Article