For the best experience, open
https://m.newskannada.com
on your mobile browser.
Advertisement

ಪುತ್ತೂರಿನಲ್ಲಿ ಉತ್ತರ ಪ್ರದೇಶ ಮೂಲದ ತಾಯಿ, ಮಗ ನಾಪತ್ತೆ

ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ವರದಿಯಾಗಿದೆ.
03:44 PM May 01, 2024 IST | Nisarga K
ಪುತ್ತೂರಿನಲ್ಲಿ ಉತ್ತರ ಪ್ರದೇಶ ಮೂಲದ ತಾಯಿ  ಮಗ ನಾಪತ್ತೆ
ಪುತ್ತೂರಿನಲ್ಲಿ ಉತ್ತರ ಪ್ರದೇಶ ಮೂಲದ ತಾಯಿ, ಮಗ ನಾಪತ್ತೆ

ಮಂಗಳೂರು: ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ವರದಿಯಾಗಿದೆ. ಉತ್ತರ ಪ್ರದೇಶದ ಮೂಲದ ಸೋನು ಸೋಂಕರ್ ಎಂಬವರ ಪತ್ನಿ ರೀಮಾ ಸೋಂಕರ್ (26) ಮತ್ತು ಮಗು ರಿಯಾ (1) ಕಾಣೆಯಾದವರು.

Advertisement

ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಹಳ್ಳಿಯೊಂದರ ಸೋನು ಸೋಂಕರ್ ಅವರು ಇಂಟೀರಿಯರ್ ಡೆಕೋರೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ಪತ್ನಿ ಹಾಗೂ ಮಗುವಿನ ಸಮೇತ ಕೌಕ್ರಾಡಿಯಲ್ಲಿ ಕೃಷ್ಣಪ್ಪ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಏಪ್ರಿಲ್ 22 ರಂದು ಸೋನು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ಸಂಜೆ ಹಿಂತಿರುಗಿ ಬಂದಾಗ ಪತ್ನಿ ಹಾಗೂ ಮಗು ಕಾಣೆಯಾಗಿದ್ದರು.

Advertisement
Advertisement
Tags :
Advertisement