ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯುದ್ಧ ಪೀಡಿತ ಗಾಜಾದಲ್ಲಿ ಐದು ಕಿಮೀ ನಡೆದು ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ

ಯುದ್ಧ ಪೀಡಿತ ಪ್ಯಾಲೆಸ್ಟೀನಿಯನ್ ಪ್ರದೇಶದ ಉತ್ತರದಲ್ಲಿರುವ ತನ್ನ ಮನೆಯಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ದಕ್ಷಿಣ ಗಾಜಾದ ಆಸ್ಪತ್ರೆಗೆ ನಡೆದು ಹೋದ ಗರ್ಭಿಣಿಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
10:45 AM Dec 29, 2023 IST | Ramya Bolantoor

ಗಾಜಾ: ಯುದ್ಧ ಪೀಡಿತ ಪ್ಯಾಲೆಸ್ಟೀನಿಯನ್ ಪ್ರದೇಶದ ಉತ್ತರದಲ್ಲಿರುವ ತನ್ನ ಮನೆಯಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ದಕ್ಷಿಣ ಗಾಜಾದ ಆಸ್ಪತ್ರೆಗೆ ನಡೆದು ಹೋದ ಗರ್ಭಿಣಿಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.

Advertisement

ಇಮಾನ್ ಅಲ್-ಮಸ್ರಿ ಎಂಬ ಮಹಿಳೆಯೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ.
ಮಹಿಳೆಯು ಜಬಾಲಿಯಾ ನಿರಾಶ್ರಿತರ ಶಿಬಿರಕ್ಕೆ ಐದು ಕಿಲೋಮೀಟರ್‌ ದೂರ ನಡೆದರು. ದಕ್ಷಿಣಕ್ಕೆ ದೇರ್ ಅಲ್-ಬಾಲಾಹ್‌ಗೆ ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆ ಇರದ ಕಾರಣ ನಡೆದುಕೊಂಡು ಹೋಗಿದ್ದಾರೆ.

ಯುದ್ಧ ಆರಂಭವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದ ನಿಟ್ಟಿನಲ್ಲಿ ಇತರ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ತೆರಳುವಂತೆ ಹೇಳಿದ್ದಾರೆ. ಆದರೆ ಆರೋಗ್ಯದಲ್ಲಿ ದುರ್ಬಲವಾಗಿದ್ದ ಕಾರಣ ಆಸ್ಪತ್ರೆಯಿಂದ ಹೊರ ಬರುವ ಸ್ಥಿತಿಯಲ್ಲಿ ಇರಲಿಲ್ಲ ಆದರೂ ಆಸ್ಪತ್ರೆಯ ಸಿಬ್ಬಂದಿಗಳ ಒತ್ತಾಯಕ್ಕೆ ಆಸ್ಪತ್ರೆಯಿಂದ ಹೊರಬಂದು ಡೇರ್ ಅಲ್ ಬಾಲಾಹ್‌ನಲ್ಲಿ ಇಕ್ಕಟ್ಟಾದ ಶಾಲಾ ಕೊಠಡಿ-ಆಶ್ರಯದಲ್ಲಿ ಆಶ್ರಯ ಪಡೆದುಕೊಂಡು ಈಗ, ಟಿಯಾ, ಲಿನ್ ಮತ್ತು ಯಾಸರ್ ಅವರೊಂದಿಗೆ ತಮ್ಮ ವಿಸ್ತೃತ ಕುಟುಂಬದ ಸುಮಾರು 50 ಇತರ ಸದಸ್ಯರೊಂದಿಗೆ ವಾಸಿಸುತ್ತಿದ್ದೇನೆ ಎಂದು ಇಮಾನ್ ಅಲ್-ಮಸ್ರಿ ಹೇಳಿಕೊಂಡಿದ್ದಾರೆ.

Advertisement

Advertisement
Tags :
LatestNewsNewsKannadaಗಾಂಜಾ
Advertisement
Next Article