For the best experience, open
https://m.newskannada.com
on your mobile browser.
Advertisement

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
07:51 AM May 18, 2024 IST | Ashika S
ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

Advertisement

ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಕೆಎಲ್ ರಾಹುಲ್ (55) ಹಾಗೂ ನಿಕೋಲಸ್ ಪೂರನ್ (75) ಭರ್ಜರಿ ಅರ್ಧಶತಕ ಪೂರೈಸಿದರು. ಈ ಮೂಲಕ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿದರು.

215 ರನ್​ಗಳ ಕಠಿಣ ಗುರಿ ಪಡೆದ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ (68) ಉತ್ತಮ ಆರಂಭ ಒದಗಿಸಿದ್ದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

Advertisement

ಅಂತಿಮ ಹಂತದಲ್ಲಿ ನಮನ್ ಧಿರ್ 28 ಎಸೆತಗಳಲ್ಲಿ 5 ಸಿಕ್ಸ್​ಗಳೊಂದಿಗೆ ಅಜೇಯ 62 ರನ್ ಬಾರಿಸಿದರೂ ತಂಡವನ್ನು ಗುರಿ ತಲುಪಿಸಲಾಗಲಿಲ್ಲ.

ಅಂತಿಮವಾಗಿ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕುವ ಮೂಲಕ ಮುಂಬೈ ಇಂಡಿಯನ್ಸ್ ತಂಡ 18 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ 14 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಉಳಿದ 10 ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಕೇವಲ 8 ಅಂಕಗಳನ್ನು ಕಲೆಹಾಕಿರುವ ಹಾರ್ದಿಕ್ ಪಾಂಡ್ಯ ಪಡೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Advertisement
Tags :
Advertisement