ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮುಂಬೈ ವಿಮಾನ ನಿಲ್ದಾಣಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ ಗರಿ

ನಗರದ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಸಿಎಸ್‌ಎಂಐಎ) 4 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಕಲ್ಪಿಸುವ ಮೂಲಕ ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲೇ ಅತ್ಯುತ್ತಮವಾದ ವಿಮಾನ ನಿಲ್ದಾಣ ಎಂಬ ಶ್ರೇಯಕ್ಕೆ ಭಾಜನವಾಗಿದೆ.
09:42 PM Mar 12, 2024 IST | Ashitha S

ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಸಿಎಸ್‌ಎಂಐಎ) 4 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಕಲ್ಪಿಸುವ ಮೂಲಕ ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲೇ ಅತ್ಯುತ್ತಮವಾದ ವಿಮಾನ ನಿಲ್ದಾಣ ಎಂಬ ಶ್ರೇಯಕ್ಕೆ ಭಾಜನವಾಗಿದೆ.

Advertisement

ಈ ಮೂಲಕ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಕೌನ್ಸಿಲ್‌ನ ವಿಮಾನ ನಿಲ್ದಾಣ ಸೇವೆಯ ಗುಣಮಟ್ಟ (ಏರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ) ಪ್ರಶಸ್ತಿಗೆ ಭಾಜನವಾಗಿದೆ.

ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಸತತ 7ನೇ ವರ್ಷವೂ ಪ್ರತಿಷ್ಠಿತವಾದ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಗೆ ಪಾತ್ರವಾಗಿದೆ ಎಂದು ಸಿಎಸ್‌ಎಂಐಎ ಹೇಳಿಕೆ ಬಿಡುಗಡೆ ಮಾಡಿದೆ.

Advertisement

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಕೌನ್ಸಿಲ್‌ನ (ಎಸಿಐ) ಪ್ರಧಾನ ನಿರ್ದೇಶಕ ಲೂಯಿಸ್ ಫಿರಿಪ್ ಡಿ ಒಲಿವೀರಾ ಅವರು, 'ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಇಡೀ ತಂಡದ ಹೊಸ ಪರಿಕಲ್ಪನೆ ಮತ್ತು ಸಮರ್ಪಣೆ ಭಾವವನ್ನು ಗುರುತಿಸಲಿದೆ. ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಭಿನಂದನೆಗಳು' ಎಂದು ತಿಳಿಸಿದ್ದಾರೆ.

Advertisement
Tags :
indiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿಪ್ರಶಸ್ತಿಮುಂಬೈವಿಮಾನ ನಿಲ್ದಾಣ
Advertisement
Next Article