ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಣಜಿ ಟ್ರೋಫಿ: 42ನೇ ಬಾರಿ ರಣಜಿ ಟ್ರೋಫಿ ಗೆದ್ದ ಮುಂಬೈ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ವಿದರ್ಭ ವಿರುದ್ಧ 169 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ರಣಜಿ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ.
04:18 PM Mar 14, 2024 IST | Ashitha S

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ವಿದರ್ಭ ವಿರುದ್ಧ 169 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ರಣಜಿ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ.

Advertisement

42ನೇ ಬಾರಿ ರಣಜಿ ಟ್ರೋಫಿ ಗೆಲ್ಲುವ ಮೂಲಕ ಮುಂಬೈ ದಾಖಲೆಯನ್ನು ಉತ್ತಮ ಪಡಿಸಿದೆ. ಟಾಸ್ ಗೆದ್ದ ವಿದರ್ಭ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಮೊದಲ ಇನ್ನಿಂಗ್ಸ್‌ನಲ್ಲಿ 224 ರನ್‌ಗಳಿಗೆ ಆಲೌಟ್ ಆಯಿತು. ಪೃಥ್ವಿ ಶಾ 46 ರನ್ ಗಳಿಸಿದರೆ, ಶಾರ್ದೂಲ್ ಠಾಕೂರ್ 69 ಎಸೆತಗಳಲ್ಲಿ 75 ರನ್ ಗಳಿಸುವ ಮೂಲಕ ಮುಂಬೈ ತಂಡಕ್ಕೆ ಆಸರೆಯಾದರು. ಹರ್ಷ್ ದುಬೆ ಮತ್ತು ಯಶ್ ಠಾಕೂರ್ ತಲಾ ಮೂರು ವಿಕೆಟ್ ಪಡೆದರು.

ಮುಂಬೈ ತಂಡವನ್ನು ಕಡಿಮೆ ರನ್‌ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ವಿದರ್ಭ ಕೇವಲ 105 ರನ್‌ಗಳಿಗೆ ಆಲೌಟ್ ಆಯಿತು. ನಾಯಕ ಅಜಿಂಕ್ಯ ರಹಾನೆ 73 ರನ್, ಶ್ರೇಯಸ್ ಅಯ್ಯರ್ 95 ರನ್ ಗಳಿಸಿದರೆ, ಶಂಸ್ ಮುಲಾನಿ 50 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು.ಹೋರಾಡಿ ಸೋತ ವಿದರ್ಭಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ ವಿದರ್ಭ ಗೆಲುವಿಗಾಗಿ ಹೋರಾಟ ನೀಡಿತು. ಕರುಣ್ ನಾಯರ್ 74 ರನ್ ಗಳಿಸಿದರೆ, ನಾಯಕ ಅಕ್ಷಯ್ ವಾಡ್ಕರ್ 102 ರನ್ ಗಳಿಸಿದರು, ಹರ್ಷ್ ದುಬೆ 65 ರನ್ ಗಳಿಸುವ ಮೂಲಕ ಮುಂಬೈ ಬೌಲರ್ ಗಳನ್ನು ಎದುರಿಸಿದರು. ಆದರೆ, ಅಂತಿಮವಾಗಿ ವಿದರ್ಭ ಎರಡನೇ ಇನ್ನಿಂಗ್ಸ್‌ನಲ್ಲಿ 368 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

Advertisement

Advertisement
Tags :
indiaKARNATAKALatestNewsNewsKannadaಬೆಂಗಳೂರುರಣಜಿ
Advertisement
Next Article