For the best experience, open
https://m.newskannada.com
on your mobile browser.
Advertisement

ಕತ್ತು ಸೀಳಿ ಯುವಕನ ಕೊಲೆ ಪ್ರಕರಣ: ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ಕತ್ತು ಸೀಳಿ ಯುವಕನನ್ನು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಎನ್​ಕೌಂಟರ್​ ಮಾಡಿದ್ದಾರೆ.
04:45 PM May 15, 2024 IST | Chaitra Kulal
ಕತ್ತು ಸೀಳಿ ಯುವಕನ ಕೊಲೆ ಪ್ರಕರಣ  ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ದೊಡ್ಡಬಳ್ಳಾಪುರ: ಕತ್ತು ಸೀಳಿ ಯುವಕನನ್ನು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಎನ್​ಕೌಂಟರ್​ ಮಾಡಿದ್ದಾರೆ.

Advertisement

ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಪೊಲೀಸರು ಎನ್​ಕೌಂಟರ್​ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮೇ 10ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್(27) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ಆತನ ಬಂಧನಕ್ಕಾಗಿ ಬಲೆ ಬೀಸಿದ್ದರು.

ಆರೋಪಿ ಊರೊಂದರಲ್ಲಿ ಅಡಗಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹಿಡಿಯಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ನಡೆಸಿದ ಫೈರಿಂಗ್​ನಲ್ಲಿ ಆರೋಪಿ ಮೃತಪಟ್ಟಿದ್ದಾನೆ.

Advertisement

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Tags :
Advertisement