ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಗೆ ಅನುಮೋದನೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ದೃಢಪಡಿಸಿದೆ.
09:21 AM Mar 14, 2024 IST | Ashitha S

ಡೆಹ್ರಾಡೂನ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಗೆ ಅನುಮೋದನೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ದೃಢಪಡಿಸಿದೆ.

Advertisement

ರಾಷ್ಟ್ರಪತಿಗಳ ಅನುಮೋದನೆಯೊಂದಿಗೆ ಉತ್ತರಾಖಂಡವು ಯುಸಿಸಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಲು ಸಿದ್ಧವಾಗಿದೆ. ಉತ್ತರಾಖಂಡದ ರಾಜ್ಯಪಾಲ ಗುರ್ಮಿತ್ ಸಿಂಗ್ ಅವರು ಫೆ.29 ರಂದು ರಾಜ್ಯ ಸರ್ಕಾರವು ಕಳುಹಿಸಿದ್ದ ಮಸೂದೆಯನ್ನು ರಾಷ್ಟ್ರಪತಿ ಮುರ್ಮು ಅವರ ಅನುಮೋದನೆಗೆ ಕಳುಹಿಸಿದ್ದರು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸರ್ಕಾರವು ಫೆ.6 ರಂದು ಯುಸಿಸಿ ಮಸೂದೆಯನ್ನು ಮಂಡಿಸಿ, ಅದರ ಮಹತ್ವವನ್ನು ಒತ್ತಿಹೇಳಿತ್ತು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯ ಅಂಗೀಕಾರವು ಉತ್ತರಾಖಂಡದ ಇತಿಹಾಸದಲ್ಲಿ ಐತಿಹಾಸಿಕ ದಿನ ಎಂದು ಬಣ್ಣಿಸಿದ್ದರು.

Advertisement

ಫೆ.7 ರಂದು ಉತ್ತರಾಖಂಡ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಬಹುಮತದೊಂದಿಗೆ ಅಂಗೀಕರಿಸಲಾಗಿತ್ತು.

Advertisement
Tags :
GOVERNMENTindiaKARNATAKALatestNewsNewsKannadaಏಕರೂಪಮಂಗಳೂರು
Advertisement
Next Article