For the best experience, open
https://m.newskannada.com
on your mobile browser.
Advertisement

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ಮುರ್ಮು

 ರಾಷ್ಟ್ಪತಿ ದ್ರೌಪದಿ ಮುರ್ಮು ಇತ್ತೀಚೆಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ (34) ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದರು.
02:50 PM Jul 11, 2024 IST | Ashitha S
ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ಮುರ್ಮು

ವದೆಹಲಿ: ರಾಷ್ಟ್ಪತಿ ದ್ರೌಪದಿ ಮುರ್ಮು(66) ಇತ್ತೀಚೆಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಬುಧವಾರ(ಜು.11) ಸಂಜೆ ರಾಷ್ಟ್ರಪತಿ ಭವನದಲ್ಲಿ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ (34) ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದರು.

Advertisement

ಇದಕ್ಕೆ ಸಂಬಂಧಿಸಿದ ಚಿತ್ರಗಳನ್ನು ಸ್ವತಃ ದ್ರೌಪದಿ ಮುರ್ಮು ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿರುವುದು ಗಮನಾರ್ಹವಾಗಿದೆ.

ವಿಶ್ವ ಕ್ರೀಡಾ ವೇದಿಕೆಗಳಲ್ಲಿ ನಮ್ಮ ಮಹಿಳಾ ಆಟಗಾರ್ತಿಯರು ಉತ್ತಮ ಪ್ರಭಾವ ಬೀರುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಅವರು ನೆನಪಿಸಿಕೊಂಡಿದ್ದಾರೆ. ಇವರಿಬ್ಬರೂ ಆಡಿದ ಸೌಹಾರ್ದ ಪಂದ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ವೈರಲ್​ ವಿಡಿಯೋದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಅದ್ಭುತ ಆಟವಾಡಿರುವುದನ್ನು ಕಾಣಬಹುದಾಗಿದೆ. ಏಕೆಂದರೆ ಸೈನಾ ನೆಹ್ವಾಲ್ ವಿರುದ್ಧ ಪಂದ್ಯ ಆಡುವುದು ಸುಲಭವಲ್ಲ. ಆದರೆ ಪಂದ್ಯದ ವೇಳೆ ದ್ರೌಪದಿ ಮುರ್ಮು ಅವರು ಬ್ಯಾಡ್ಮಿಂಟನ್ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಈ ವಿಡಿಯೋ ನೋಡಿದ ನೆಟ್ಟಿಗರು ರಾಷ್ಟ್ರಪತಿಗಳು ತುಂಬಾ ಚೆನ್ನಾಗಿ ಆಡಿದ್ದಾರೆ ಎಂದು ಮೆಚ್ಚುಗೆಯ ಕಮೆಂಟ್ ಮಾಡುತ್ತಿದ್ದಾರೆ.

Advertisement
Tags :
Advertisement