For the best experience, open
https://m.newskannada.com
on your mobile browser.
Advertisement

ಮುರುಘಾಮಠದ ಆಡಳಿತ ಅಧಿಕಾರ ಮರಳಿ ಪಡೆದ ಮುರುಘಾಶ್ರೀ

ಪೋಕ್ಸೋ ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು.
09:54 PM Dec 07, 2023 IST | Gayathri SG
ಮುರುಘಾಮಠದ ಆಡಳಿತ ಅಧಿಕಾರ ಮರಳಿ ಪಡೆದ ಮುರುಘಾಶ್ರೀ

ಚಿತ್ರದುರ್ಗ: ಪೋಕ್ಸೋ ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು.

Advertisement

ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ಈ ನೇಮಕವನ್ನು ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್ ಮೊರೆಹೋಗಿದ್ದ ಹಿನ್ನೆಲೆ ಆಡಳಿತಾಧಿಕಾರಿ ನೇಮಕವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಆಗ ಮಠದ ಪೀಠಾಧಿಪತಿಯಾಗಿದ್ದ ಮುರುಘಾಶ್ರೀ ಜೈಲಲ್ಲಿದ್ದ ಕಾರಣ, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಿಗೆ ತಾತ್ಕಾಲಿಕವಾಗಿ ಮಠದ ಆಡಳಿತದ ಅಧಿಕಾರ ನೀಡಿತ್ತು.

ಹೀಗಾಗಿ ಈವರೆಗೆ ಚಿತ್ರದುರ್ಗ ಪಿಡಿಜೆ ಅವರು ಮಠದ ಆಡಳಿತಾಧಿಕಾರಿ ಆಗಿದ್ದರು. ಆದರೆ ನವೆಂಬರ್ 16ರಂದು ಮುರುಘಾಶ್ರೀ ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಮಠದ ಅಧಿಕಾರಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅಧಿಕಾರ ಹಸ್ತಾಂತರಿಸುವಂತೆ ಚಿತ್ರದುರ್ಗದ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಮತ್ತು ಸೆಷನ್ಸ್ ಜಡ್ಜ್‌ಗೆ ಸೂಚಿಸಿದೆ.

Advertisement

Advertisement
Tags :
Advertisement