For the best experience, open
https://m.newskannada.com
on your mobile browser.
Advertisement

'ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಸಂಘಟನೆ' ಕಾನೂನುಬಾಹಿರ ಎಂದು ಘೋಷಣೆ

'ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ' ಎಂಬ ಸಂಘಟನೆಯನ್ನ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ 'ಕಾನೂನುಬಾಹಿರ ಸಂಘಟನೆ' ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
05:02 PM Dec 27, 2023 IST | Ashitha S
 ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಸಂಘಟನೆ  ಕಾನೂನುಬಾಹಿರ ಎಂದು ಘೋಷಣೆ

ನವದೆಹಲಿ: 'ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ' ಎಂಬ ಸಂಘಟನೆಯನ್ನ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ 'ಕಾನೂನುಬಾಹಿರ ಸಂಘಟನೆ' ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

Advertisement

ಈ ಹಿಂದೆ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ನೇತೃತ್ವ ವಹಿಸಿದ್ದ ಆಲ್ ಇಂಡಿಯಾ ಹುರಿಯತ್ ಕಾನ್ಫರೆನ್ಸ್'ನ ಕಟ್ಟರ್ ಬಣದ ಮಧ್ಯಂತರ ಅಧ್ಯಕ್ಷ ಮಸರತ್ ಆಲಂ ಈ ಸಂಘಟನೆಯ ನೇತೃತ್ವ ವಹಿಸಿದ್ದಾರೆ.

"ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ, ಭಯೋತ್ಪಾದಕ ಚಟುವಟಿಕೆಗಳನ್ನ ಬೆಂಬಲಿಸುತ್ತಿದ್ದಾರೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನ ಸ್ಥಾಪಿಸಲು ಜನರನ್ನ ಪ್ರಚೋದಿಸುತ್ತಿದ್ದಾರೆ" ಎಂದು ಶಾ ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

Advertisement
Tags :
Advertisement