ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕುಡುಪು ದೇವಸ್ಥಾನದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ಸ್ಥಳ ನಿರಾಕರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ ದಂಗಲ್ ಮುಂದುವರಿದಿದೆ. ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಮಾಡಿದ ಆರೋಪ ಕೇಳಿಬಂದಿದ್ದು, ಬೀದಿ ಬದಿ ವ್ಯಾಪಾರಿಗಳ ಸಂಘ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದೆ.
01:24 PM Dec 07, 2023 IST | Ashitha S

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ ದಂಗಲ್ ಮುಂದುವರಿದಿದೆ. ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಮಾಡಿದ ಆರೋಪ ಕೇಳಿಬಂದಿದ್ದು, ಬೀದಿ ಬದಿ ವ್ಯಾಪಾರಿಗಳ ಸಂಘ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದೆ.

Advertisement

ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವದ ಜಾತ್ರೆ ನಡೆಯಲಿದೆ. ಆದರೆ, ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ಆರೋಪ ಕೇಳಿಬಂದಿದೆ.

ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಲಾಗುತ್ತಿದೆ.

Advertisement

ಅಲ್ಲದೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಆಗ್ರಹಿಸಿದ ಮುಸ್ಲಿಂ ವ್ಯಾಪಾರಿಗಳು, ತಕ್ಷಣ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.

 

Advertisement
Tags :
GOVERNMENTindiaKARNATAKALatestNewsNewsKannadaಉಡುಪಿಕುಡುಪು ದೇವಸ್ಥಾನಮಂಗಳೂರು
Advertisement
Next Article