For the best experience, open
https://m.newskannada.com
on your mobile browser.
Advertisement

‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನ ಎಕ್ಸ್‌ ಜಾಲತಾಣದಲ್ಲಿ ಟ್ರೆಂಡಿಂಗ್‌

ಸಾಮಾಜಿಕ ಜಾಲತಾಣದಲ್ಲಿ ಕೈಗೊಂಡಿರುವ ‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನ ʼಎಕ್ಸ್‌ʼ ನಲ್ಲಿ ಟ್ರೆಂಡಿಂಗ್‌ ಆಗಿದೆ. ‘ಕೇಂದ್ರ ಸರಕಾರದ ಭಾಷಾ ಸವಾರಿ, ಸಾಂಸ್ಕೃತಿಕ ಸವಾರಿ, ರಾಜಕೀಯ ಸವಾರಿ, ಆರ್ಥಿಕ ಸವಾರಿಯನ್ನು ಸಹಿಸಿಕೊಳ್ಳಲು ಕನ್ನಡಿಗರು ಕತ್ತೆಗಳಲ್ಲ, ಸಿಡಿದೇಳುವ ಸಿಂಹಗಳು’ ಎಂದು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
07:26 AM Feb 05, 2024 IST | Ashitha S
‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನ ಎಕ್ಸ್‌ ಜಾಲತಾಣದಲ್ಲಿ ಟ್ರೆಂಡಿಂಗ್‌

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೈಗೊಂಡಿರುವ ‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನ ʼಎಕ್ಸ್‌ʼ ನಲ್ಲಿ ಟ್ರೆಂಡಿಂಗ್‌ ಆಗಿದೆ. ‘ಕೇಂದ್ರ ಸರಕಾರದ ಭಾಷಾ ಸವಾರಿ, ಸಾಂಸ್ಕೃತಿಕ ಸವಾರಿ, ರಾಜಕೀಯ ಸವಾರಿ, ಆರ್ಥಿಕ ಸವಾರಿಯನ್ನು ಸಹಿಸಿಕೊಳ್ಳಲು ಕನ್ನಡಿಗರು ಕತ್ತೆಗಳಲ್ಲ, ಸಿಡಿದೇಳುವ ಸಿಂಹಗಳು’ ಎಂದು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Advertisement

ರವಿವಾರ ‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನಕ್ಕೆ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ‘ನನ್ನ ತೆರಿಗೆ ನನ್ನ ಹಕ್ಕು’ ಎಕ್ಸ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ’ ಎಂದು ಹೇಳಿದ್ದರು.

Advertisement

Advertisement
Tags :
Advertisement