For the best experience, open
https://m.newskannada.com
on your mobile browser.
Advertisement

ರಾಮೇಶ್ವರಂ ಕೆಫೆ ಸ್ಫೋಟ ಸ್ಥಳಕ್ಕೆ ಎನ್‌ಐಎ ಎಂಟ್ರಿ: ಇಲ್ಲಿ ಕೇಳಿ ಬಂತು ಅಂಬಾನಿ ಹೆಸರು !

ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಹೊರಗಡೆಯಿಂದ ತಂದಿಟ್ಟಿದ್ದ ಬ್ಯಾಗ್​ನಲ್ಲಿನ ವಸ್ತು ಸ್ಫೋಟವಾಗಿದೆ ೆಂದು ತಿಳಿದು ಬಂದಿದೆ.
05:24 PM Mar 01, 2024 IST | Ashitha S
ರಾಮೇಶ್ವರಂ ಕೆಫೆ ಸ್ಫೋಟ ಸ್ಥಳಕ್ಕೆ ಎನ್‌ಐಎ ಎಂಟ್ರಿ  ಇಲ್ಲಿ ಕೇಳಿ ಬಂತು ಅಂಬಾನಿ ಹೆಸರು

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಹೊರಗಡೆಯಿಂದ ತಂದಿಟ್ಟಿದ್ದ ಬ್ಯಾಗ್​ನಲ್ಲಿನ ವಸ್ತು ಸ್ಫೋಟವಾಗಿದೆ ೆಂದು ತಿಳಿದು ಬಂದಿದೆ.

Advertisement

ಇನ್ನು ಅಂಬಾನಿ ಕುಟುಂಬದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಇದೇ ರಾಮೇಶ್ವರ ಕೆಫೆ ಕ್ಯಾಟರಿಂಗ್ ವಹಿಸಿಕೊಂಡಿದೆ. ಅಲ್ಲದೇ ಭಾರತದ್ಯಾಂತ ಕ್ಯಾಟರಿಂಗ್ ವಿಸ್ತರಿಸಲು ನಿರ್ಧಾರಿಸಿದ್ದರು. ಈ ಹಿನ್ನೆಲೆಯಲ್ಲಿ ಬ್ಯುಸಿನೆಸ್‌ ಸಂಬಂಧ ಸ್ಪೋಟಿಸಿರುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗಿವೆ.

ಇನ್ನು ಸ್ಫೋಟದ ಹಿಂದೆ ಹಲವು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಸ್ಥಳಕ್ಕೆ ಸುತ್ತಮುತ್ತಲಿನ ಠಾಣೆಯ ಪೊಲೀಸರು, ಹಿರಿಯ ಅಧಿಕಾರಿಗಳು ಘಟನಾ ಸ್ಥಕ್ಕೆ ದೌಡಾಯಿಸಿದ್ದಾರೆ. ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳದಲ್ಲಿ ಮೊಕ್ಕಂ ಹೂಡಿದ್ದಾರೆ. ಇನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

Advertisement

ಇನ್ನು ಈ ಘಟನೆ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಅವರು ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತಂಡ ಸಹ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ.

Read More:

1.

ಇಂದಿರಾನಗರದಲ್ಲಿರುವ ರಾಮಶ್ವರಂ ಕೆಫೆಯಲ್ಲಿ ಸ್ಫೋಟ: ಐವರು ಗಂಭೀರ ಗಾಯ

Advertisement
Tags :
Advertisement