ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಜಯೇಂದ್ರ ಭೇಟಿ ಬೆನ್ನಲ್ಲೇ ನಳಿನ್ ಕುಮಾರ್ ಭಾವುಕ: ಕಾರ್ಯಕರ್ತರ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ

ಬಿ ವೈ ವಿಜಯೇಂದ್ರ ಭೇಟಿ ಬೆನ್ನಲ್ಲೇ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾಗಿದ್ದಾರೆ.
11:38 AM Nov 23, 2023 IST | Ramya Bolantoor

ಬಂಟ್ವಾಳ : ಬಿ ವೈ ವಿಜಯೇಂದ್ರ ಭೇಟಿ ಬೆನ್ನಲ್ಲೇ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾಗಿದ್ದಾರೆ. ಬಂಟ್ವಾಳದ ಆಭಿನಂದನಾ ಸಮಾರಂಭವೊಂದರಲ್ಲಿ ಕಾರ್ಯಕರ್ತರ ಅಸಮಾಧಾನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್ ಅವರು, ನನ್ನ ವಿರುದ್ದದ ಹಲವು ಟೀಕೆ ,ಟಿಪ್ಪಣಿಯನ್ನ ಕೇಳಿದ್ದೇನೆ. ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ . ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ.

Advertisement

ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ ,ಹಲವು ನೋವನ್ನ ಅನುಭವಿಸಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ. ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ . ನನಗೂ ದುಃಖವಿದೇ ಸಂಸದನಾದ ಬಳಿಕ ಹಳ್ಳಿ ಹಳ್ಳಿಗಳಿಗೆ ಬರಲು ಆಗಲಿಲ್ಲ . ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇಡೀ ರಾಜ್ಯದ ಜವಾಬ್ದಾರಿಯಿತ್ತು . ಪ್ರಾಮಾಣಿಕವಾಗಿ ಬಿಜೆಪಿಯನ್ನ ಹಳ್ಳಿ ಹಳ್ಳಿಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಆದರೆ ನೀವು ತಲೆ ತಗ್ಗಿಸುವ ರೀತಿಯ ಕೆಲಸ ಮಾಡಲಿಲ್ಲ. ಈಗ ಮತ್ತೆ ನಾನು ದಕ್ಷಿಣ ಕನ್ನಡ ಜಿಲ್ಲೆಯತ್ತ ಗಮನ ನೀಡುತ್ತೇನೆ . ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ . ಇನ್ನೂ ಉಳಿದಿರುವ 6 ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆ . ಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದಿದ್ದಾರೆ.

Advertisement
Advertisement
Tags :
BJPKARNATAKALatestNewsNewsKannadaನಳಿನ್ ಕುಮಾರ್ ಕಟೀಲ್ಬಂಟ್ವಾಳಬಿಜೆಪಿಮಂಗಳೂರು
Advertisement
Next Article