For the best experience, open
https://m.newskannada.com
on your mobile browser.
Advertisement

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರತ್ಯೇಕ ʼಕನ್ನಡʼ ಖಾತೆ ಆರಂಭಿಸಿದ ಮೋದಿ

ಲೋಕಸಭೆ ಚುನಾವಣೆಯ ಮೊದಲನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ ತೆರೆದಿದ್ದಾರೆ.
12:31 PM Apr 10, 2024 IST | Ashitha S
ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರತ್ಯೇಕ ʼಕನ್ನಡʼ ಖಾತೆ ಆರಂಭಿಸಿದ ಮೋದಿ

ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ ತೆರೆದಿದ್ದಾರೆ.

Advertisement

‘ನಮೋ ಕನ್ನಡ’ ಎಂಬ ಹೆಸರಿನಲ್ಲಿ ನರೇಂದ್ರ ಮೋದಿ ಕನ್ನಡ ಖಾತೆ ಆರಂಭಿಸಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಮೇ 7ರಂದು ನಂತರದ ಹಂತದ ಮತದಾನ ನಡೆಯಲಿದೆ. ಹೀಗಾಗಿ ಮತದಾರರನ್ನು ತಲುಪುವ ಉದ್ದೇಶದಿಂದ ಹೊಸ ಖಾತೆ ತೆರೆಯಲಾಗಿದೆ.

Advertisement

ಕನ್ನಡ ಭಾಷೆಯಲ್ಲಿ ಮೋದಿ ತೆರೆದಿರುವ ಪ್ರತ್ಯೇಕ ಎಕ್ಸ್ ಖಾತೆಯಲ್ಲಿ ಮೋದಿ ಭಾಷಣದ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಲಾಗಿದೆ. ಆದರೆ, ಈ ವಿಡಿಯೋಗಳಿಗೆ ಮೋದಿ ಭಾಷಣದ ಕನ್ನಡಾನುವಾದದ ಹಿನ್ನೆಲೆ ಧ್ವನಿ ನೀಡಲಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸಿರುವ ಮೋದಿ, ಮತ್ತೊಮ್ಮೆ ಏಪ್ರಿಲ್ 14ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

Advertisement
Tags :
Advertisement