ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜ. 24: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

ಹೆಣ್ಣು ಮಕ್ಕಳು ಪ್ರತಿ ಮನೆಯ ದೊಡ್ಡ ಆಸ್ತಿ. ಹೆಣ್ಣು ಮಗುವಿನಿಂದ ಮನೆ, ಕುಟುಂಬ ಬೆಳೆಯುತ್ತದೆ, ಬೆಳಗುತ್ತದೆ ಎಂಬ ಮಾತಿದೆ. ಪ್ರತಿ ಕುಟುಂಬದಲ್ಲೂ ಹೆಣ್ಣು ಮಕ್ಕಳ ಪಾತ್ರ ಹಿರಿದು. ಹೀಗೆ ಪ್ರತಿಯೊಬ್ಬರ ಬಾಳಿನಲ್ಲೂ ಮಹತ್ವದ ಪಾತ್ರ ವಹಿಸುವ ಹೆಣ್ಣು ಮಕ್ಕಳಿಗಾಗಿ ಮೀಸಲಾದ ದಿನವಿದು.
12:53 PM Jan 24, 2024 IST | Ashitha S

ಹೆಣ್ಣು ಮಕ್ಕಳು ಪ್ರತಿ ಮನೆಯ ದೊಡ್ಡ ಆಸ್ತಿ. ಹೆಣ್ಣು ಮಗುವಿನಿಂದ ಮನೆ, ಕುಟುಂಬ ಬೆಳೆಯುತ್ತದೆ, ಬೆಳಗುತ್ತದೆ ಎಂಬ ಮಾತಿದೆ. ಪ್ರತಿ ಕುಟುಂಬದಲ್ಲೂ ಹೆಣ್ಣು ಮಕ್ಕಳ ಪಾತ್ರ ಹಿರಿದು. ಹೀಗೆ ಪ್ರತಿಯೊಬ್ಬರ ಬಾಳಿನಲ್ಲೂ ಮಹತ್ವದ ಪಾತ್ರ ವಹಿಸುವ ಹೆಣ್ಣು ಮಕ್ಕಳಿಗಾಗಿ ಮೀಸಲಾದ ದಿನವಿದು.

Advertisement

ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಪೋಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜನವರಿ 24 ರಂದು ಭಾರತದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.

ಈ ದಿನ ಹೆಣ್ಣು ಮಕ್ಕಳ ಹಕ್ಕುಗಳ ಹಾಗೂ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ. ಇದು ಬಾಲ್ಯವಿವಾಹ, ಲಿಂಗ ತಾರತಮ್ಯ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ, ಅಸಮಾನತೆ ಸೇರಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಹಲವಾರು ಸವಾಲು, ಸಮಸ್ಯೆಗಳನ್ನು ಪರಿಹರಿಸಲು ವೇದಿಕೆಯನ್ನು ಒದಗಿಸಿದೆ.  ಇನ್ನು ಸರ್ಕಾರವು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮೂಲಕ ಪ್ರತಿ ಹೆಣ್ಣು ಮಗುವಿಗೆ ಸಮಾನತೆ ನೀಡಬೇಕು ಎಂಬ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದೆ. ಪ್ರತಿ ವರ್ಷ ಈ ದಿನ ಹೆಣ್ಣುಮಕ್ಕಳ ಸಬಲೀಕರಣದ ಸಂದೇಶವನ್ನು ಹರಡಲು ದೇಶದಾದ್ಯಂತ ಜಾಗೃತಿ ಅಭಿಯಾನಗಳನ್ನು ಆಯೋಜಿಸಲಾಗುತ್ತದೆ.

Advertisement

ಇನ್ನು 2015ರಲ್ಲಿ ಜನವರಿ 22ರಂದು ಪ್ರಧಾನಿ ಮೋದಿ ಅವರು ಪ್ರಾರಂಭಿಸಿದ ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆ (ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ) ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯ ಮೂರೂ ಇಲಾಖೆಗಳು ಜಂಟಿಯಾಗಿ ಈ ದಿನವನ್ನು ಆಚರಿಸುತ್ತವೆ.

ಇನ್ನು ಇಂದು ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ವಿಶೇಷವಾಗಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ದೇಶ ಮತ್ತು ಸಮಾಜವನ್ನು ಉತ್ತಮಗೊಳಿಸುವ ಪರಿವರ್ತಕರು ಹೆಣ್ಣು ಮಕ್ಕಳು ಎಂದು ಪ್ರಧಾನಿ ಮೋದಿ ಅವರು ಬಣ್ಣಿಸಿದ್ದಾರೆ. ದೇಶದಲ್ಲಿ ಹೆಣ್ಣು ಮಕ್ಕಳು ಅಭಿವೃದ್ಧಿ ಹೊಂದಲು ಬೇಕಾಗಿರುವ ಎಲ್ಲ ಅವಕಾಶಗಳನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಹೆಣ್ಣು ಮಕ್ಕಳ ದಿನದಂದು ಹೆಣ್ಣು ಮಗುವಿನ ಸಧನೆಗಳಿಗೆ ನಾವು ನಮನ ಸಲ್ಲಿಸುತ್ತೇವೆ. ಎಲ್ಲ ವಲಯದಲ್ಲೂ ಪ್ರತಿ ಹೆಣ್ಣು ಮಗುವಿನ ಸಾಮರ್ಥ್ಯವನ್ನು ನಾವು ಗುರುತಿಸುತ್ತೇವೆ. ಹೆಣ್ಣು ಮಕ್ಕಳು ನಮ್ಮ ಸಮಾಜ ಮತ್ತು ದೇಶವನ್ನು ಉತ್ತಮವಾಗಿ ಪರಿವರ್ತಿಸುವಲ್ಲಿ ಪ್ರಮುಖರು. ಕಳೆದ ದಶಕದಿಂದ ನಮ್ಮ ಸರ್ಕಾರ ಪ್ರತಿ ಹೆಣ್ಣು ಮಗುವಿನ ಕಲಿಕೆ ಬೆಳವಣಿಗೆಗೆ ಅವಕಾಶವನ್ನು ನೀಡುವ ಮೂಲಕ ದೇಶ ಕಟ್ಟುವ ಪ್ರಯತ್ನ ನಡೆಸುತ್ತಿದೆ ಎಂದಿದ್ದಾರೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ 2024ರ ಥೀಮ್:
ಇಲ್ಲಿಯವರೆಗೆ 2024ರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲು ಸರ್ಕಾರವು ಯಾವುದೇ ಥೀಮ್ ಅನ್ನು ಘೋಷಿಸಿಲ್ಲ. ‘ಉಜ್ವಲವಾದ ನಾಳೆಗಾಗಿ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವುದು’ ಎಂಬುದು 2019ರ ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ವಿಷಯವಾಗಿತ್ತು. 2020ರ ಥೀಮ್ ‘ನನ್ನ ಧ್ವನಿ, ನಮ್ಮ ಭವಿಷ್ಯ’ ಎಂಬುದಾಗಿತ್ತು. ‘ಡಿಜಿಟಲ್ ಜನರೇಷನ್, ನಮ್ಮ ಪೀಳಿಗೆ’ ಎಂಬುದು 2021ರಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ವಿಷಯವಾಗಿತ್ತು.

Advertisement
Tags :
GOVERNMENTindiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿಹೆಣ್ಣು ಮಕ್ಕಳ ದಿನ
Advertisement
Next Article