ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸ್ವಾಮಿ ವಿವೇಕಾನಂದ ಜಯಂತಿಯಂದೇ 'ರಾಷ್ಟ್ರೀಯ ಯುವ ದಿನ' ಯಾಕೆ ?

ರಾಷ್ಟ್ರೀಯ ಯುವ ದಿನ ಅಥವಾ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಪ್ರತಿ ವರ್ಷ ಜನವರಿ 12 ಆಚರಿಸಲಾಗುತ್ತದೆ. ಹೌದು. . ವಿವೇಕಾನಂದರು 1863ರ ಜನವರಿ 12 ರಂದು ಕೊಲ್ಕೊತ್ತಾದಲ್ಲಿ ಜನಿಸಿದರು. ಇವರ ಮೊದಲ ಹೆಸರು ನರೇಂದ್ರನಾಥ ದತ್ತಾ. ಇವರ ತಂದೆ ವಿಶ್ವನಾಥ ದತ್ತ, ಇವರ ತಾಯಿ ಭುವನೇಶ್ವರಿ ದೇವಿ. ವಿಶ್ವದ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಲ್ಲುವ ಜಗತ್ತಿನ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು. ಅಂತಹ ತೇಜಸ್ವಿ ಸಾಧಕ ಸಂತರ ನುಡಿ ಸದಾ ಪ್ರೇರಣಾದಾಯಿಕವಾಗಿರುತ್ತದೆ.
11:49 AM Jan 12, 2024 IST | Ashitha S

ರಾಷ್ಟ್ರೀಯ ಯುವ ದಿನ ಅಥವಾ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಪ್ರತಿ ವರ್ಷ ಜನವರಿ 12 ಆಚರಿಸಲಾಗುತ್ತದೆ. ಹೌದು. . ವಿವೇಕಾನಂದರು 1863ರ ಜನವರಿ 12 ರಂದು ಕೊಲ್ಕೊತ್ತಾದಲ್ಲಿ ಜನಿಸಿದರು. ಇವರ ಮೊದಲ ಹೆಸರು ನರೇಂದ್ರನಾಥ ದತ್ತಾ. ಇವರ ತಂದೆ ವಿಶ್ವನಾಥ ದತ್ತ, ಇವರ ತಾಯಿ ಭುವನೇಶ್ವರಿ ದೇವಿ. ವಿಶ್ವದ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಲ್ಲುವ ಜಗತ್ತಿನ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು. ಅಂತಹ ತೇಜಸ್ವಿ ಸಾಧಕ ಸಂತರ ನುಡಿ ಸದಾ ಪ್ರೇರಣಾದಾಯಿಕವಾಗಿರುತ್ತದೆ.

Advertisement

ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಬದುಕಿದ ಹಾದಿ, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳಿಂದ ಅವರು ಇಂದಿಗೂ ಎಂದೆಂದಿಗೂ ಪ್ರಪಂಚದ ಆಧ್ಯಾತ್ಮಿಕ ಗುರು. ಆದರ್ಶ ವ್ಯಕ್ತಿಯೇ.

ಯುವಜನತೆಗೆ ನೀಡಿದ ಅವರ ಕರೆ 'ಏಳಿ.. ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂಬುದು ಸರ್ವ ಕಾಲಕ್ಕೂ ನೆನೆಯುವ, ಯುವಕರನ್ನು ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರ ಮಾಡುವ ವಾಕ್ಯವಾಗಿದೆ. ಹೀಗೆ ಅವರ ಇಂತಹ ಹಲವು ಕೊಡುಗೆಗಳಿಂದ ಅವರ ಸ್ಮರಣಾರ್ಥ, ಅವರ ಕೊಡುಗೆ, ಸೇವೆಗಳ ನೆನಪಿಗಾಗಿ, ಅವರಿಂದ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನವನ್ನು 'ರಾಷ್ಟ್ರೀಯ ಯುವ ದಿನ' ಎಂದು ಆಚರಣೆ ಮಾಡಲಾಗುತ್ತದೆ.

Advertisement

ಸ್ವಾಮಿ ವಿವೇಕಾನಂದರ ಜನ್ಮ ದಿನದಂದೇ (ಜ.12) ರಾಷ್ಟ್ರೀಯ ಯುವ ದಿನ ಆಚರಣೆ ಮಾಡಬೇಕು ಎಂದು ನಿರ್ಧಾರವನ್ನು ತೆಗೆದುಕೊಂಡಿದ್ದು ಭಾರತ ಸರ್ಕಾರ. ಈ ತೀರ್ಮಾನವನ್ನು 1984 ರಲ್ಲಿ ಅಂದಿನ ಕೇಂದ್ರ ಸರ್ಕಾರ ತೆಗೆದುಕೊಂಡಿತು. ಸ್ವಾಮಿ ವಿವೇಕಾನಂದರ ತತ್ವಗಳು ಮತ್ತು ಅವರು ಬದುಕಿದ ಹಾದಿ, ದುಡಿದ ಆದರ್ಶಗಳು ಭಾರತೀಯರು ಯುವ ದಿನಾಚರಣೆ ಆಚರಿಸಲು ಸ್ಫೂರ್ತಿಯ ಉತ್ತಮ ಮೂಲವಾಗಿದೆ ಎಂದು ಸರ್ಕಾರ ಹೇಳಿತ್ತು. ಇನ್ನು ಪ್ರಖುವಾಘಿ ಹೇಳುವುದಾದರೇ 19 ನೇ ಶತಮಾನದಲ್ಲಿ ಪ್ರಪಂಚದ ಪ್ರಮುಖ ಧರ್ಮಗಳ ಪೈಕಿ ಹಿಂದು ಧರ್ಮವು ಒಂದು ಶ್ರೇಷ್ಠ ಧರ್ಮ ಎಂಬ ಭಾವನೆ ಮೂಡಿಸಿದವರಲ್ಲಿ ಇವರು ಪ್ರಮುಖರಾಗಿದ್ದಾರೆ.

ವಿವೇಕಾನಂದರ ತತ್ವಗಳು, ಆದರ್ಶಗಳು ಇಂದಿಗೂ ಪ್ರಸ್ತುತ. ಇವರ ತತ್ವಗಳನ್ನು ಭಾರತ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅನುಸರಿಸುತ್ತಾರೆ. ವಿವೇಕಾನಂದರು ಪ್ರಪಂಚದಾದ್ಯಂತ ಹಿಂಬಾಲಕರನ್ನು ಹೊಂದಿದ್ದಾರೆ. ರಾಷ್ಟ್ರೀಯ ಯುವ ದಿನ ಅಥವಾ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಪ್ರತಿ ವರ್ಷ ರಾಮಕೃಷ್ಣ ಮಠ, ರಾಮಕೃಷ್ಣ ಮಿಷನ್ ಮತ್ತು ಅವರ ಶಾಖೆಗಳ ಅನೇಕ ಕೇಂದ್ರಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಪ್ರಕಾರ ಅತ್ಯಂತ ಉತ್ಸಾಹ ಮತ್ತು ಸಂತೋಷದಿಂದ ಆಚರಿಸಲಾಗುತ್ತದೆ.

ಇನ್ನು  1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಅಮೆರಿಕದ ಸಹೋದರ-ಸಹೋದರಿಯರೇ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದ್ದರು. ಭಾರತದ ಸಂಸ್ಕೃತಿ, ಅದರ ಪ್ರಾಮುಖ್ಯತೆ, ಹಿಂದೂ ಧರ್ಮದ ಬಗ್ಗೆ ವಿಶ್ವದೆಲ್ಲೆಡೆ ಪರಿಚಯಿಸಿದ ಖ್ಯಾತಿ ಇವರದ್ದು.  ಇವರ ಬೋಧನೆಗಳು ಯುವಕರನ್ನು ಪ್ರೇರೇಪಿಸುವುದಲ್ಲದೆ ದೇಶದ ಅಭಿವೃದ್ಧಿಗೆ ದಾರಿ ಮಾಡಿಕೊಟ್ಟವು. ಆದ್ದರಿಂದ, ಭಾರತದಲ್ಲಿ ಪ್ರತಿ ವರ್ಷ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ವಿವೇಕಾನಂದರು 1902 ಜುಲೈ 4 ರಂದು ನಿಧನರಾಗುತ್ತಾರೆ.

 

Advertisement
Tags :
GOVERNMENTindiaLatestNewsNewsKannadaನವದೆಹಲಿರಾಷ್ಟ್ರೀಯ ಯುವ ದಿನಸ್ವಾಮಿ ವಿವೇಕಾನಂದ
Advertisement
Next Article