ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಕ್ಸಲ್‌ ತಂಡ ಭೇಟಿ ವದಂತಿ: ಎಸ್ಪಿ ನೀಡಿದ ಸ್ಪಷ್ಟನೆ ಏನು?

ಬೆಳ್ತಂಗಡಿಯ ಕುತ್ಲೂರಿನ ಮನೆಯೊಂದಕ್ಕೆ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ವಿಚಾರ ಭಾರಿ ಆತಂಕಕ್ಕೆ ಕಾರಣವಾಗಿತ್ತು. ಇದೀಗ ನಕ್ಸಲರ ಭೇಟಿ ಸುಳ್ಳು ಸುದ್ದಿ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
12:04 PM Nov 23, 2023 IST | Gayathri SG

ಬೆಳ್ತಂಗಡಿ: ಬೆಳ್ತಂಗಡಿಯ ಕುತ್ಲೂರಿನ ಮನೆಯೊಂದಕ್ಕೆ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ವಿಚಾರ ಭಾರಿ ಆತಂಕಕ್ಕೆ ಕಾರಣವಾಗಿತ್ತು. ಇದೀಗ ನಕ್ಸಲರ ಭೇಟಿ ಸುಳ್ಳು ಸುದ್ದಿ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Advertisement

ಕುತ್ಲೂರಿನಲ್ಲಿ ಮನೆಯೊಂದಕ್ಕೆ ಮಂಗಳವಾರ ತಡರಾತ್ರಿ ನಕ್ಸಲರು ಭೇಟಿ ನೀಡಿದ್ದರು ಎಂಬ ವದಂತಿಯೊಂದು ಬುಧವಾರ ಬೆಳಗ್ಗೆ ಸೃಷಿಯಾಗಿತ್ತು. ಆದರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಮತ್ತು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರು ಸ್ಪಷ್ಟನೆ ನೀಡಿದ್ದು, ಪ್ರಕರಣವೊಂದರ ತನಿಖೆಗಾಗಿ ಮೂಡುಬಿದಿರೆ ಪೊಲೀಸರು ಅಲ್ಲಿಗೆ ತೆರಳಿದ್ದರು ಎಂದು ತಿಳಿಸಿದ್ದಾರೆ.

ಕುತ್ಲೂರು ಗ್ರಾಮದ ನಿವಾಸಿ ಜೋಸಿ ಆಂಟೋನಿ ತನ್ನ ಮನೆಗೆ ರಾತ್ರಿಯ ವೇಳೆ ಮಹಿಳೆ ಸೇರಿದಂತೆ ಅಪರಿಚಿತರ ತಂಡ ಬಂದು ಬಾಗಿಲು ಬಡಿದಿದೆ; ಆದರೆ ನಾನು ಬಾಗಿಲು ತೆರೆಯಲಿಲ್ಲ ಎಂದು ನ. 21ರ ರಾತ್ರಿ ಪೊಲೀಸರ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ ಹೇಳಿದ್ದರು. ಅವರು ಪೊಲೀಸರು ಎಂದು ಹೇಳಿದರೂ ಸಮವಸ್ತ್ರದಲ್ಲಿರದ ಕಾರಣ ಅನುಮಾನವಿದೆ, ನಕ್ಸಲರಾಗಿರಬಹುದು ಎಂಬ ಹೇಳಿಕೆಯನ್ನು ನೀಡಿದ್ದು ಇದು ಹಲವಾರು ಗೊಂದಲಗಳಿಗೆ ಕಾರಣವಾಗಿತ್ತು. ಇಲ್ಲಿನ ಜೋಸಿ ಆಂಟೋನಿ ತನ್ನ ಒಂದು ಜಾಗವನ್ನು ಬೆಂಗಳೂರಿನ ಸುಹನಾ ಅವರಿಗೆ 45 ಲಕ್ಷಕ್ಕೆ ರೂ.ಗೆ ಅಗ್ರಿಮೆಂಟ್‌ ಮಾಡಿದ್ದು 24 ಲಕ್ಷ ರೂ. ಚೆಕ್‌ ಮೂಲಕ ಪಡೆದಿದ್ದರು. ಅಂತೆಯೇ ಬೆಂಗಳೂರಿನ ಶರತ್‌ ಅವರಿಗೆ 48 ಲಕ್ಷ ರೂ.ಗೆ ಅಗ್ರಿಮೆಂಟ್‌ ಮಾಡಿ 19 ಲಕ್ಷ ರೂ. ಚೆಕ್‌ ಮೂಲಕ ಪಡೆದು ವಂಚಿಸಿದ್ದರು ಎನ್ನಲಾಗುತ್ತಿದೆ.

Advertisement

ಈ ಬಗ್ಗೆ ನ. 17ರಂದು ಮೂಡುಬಿದಿರೆ ಪೊಲೀಸ್‌ ಠಾಣೆಗೆ ಸಂತ್ರಸ್ತರಿಂದ ದೂರು ಬಂದಿದ್ದು, ವಿಚಾರಣೆಗಾಗಿ ಪೊಲೀಸರು ಫೋನ್‌ ಮೂಲಕ ಸಂಪರ್ಕಸಿದಾಗ ಆತ ಸಂರ್ಪಕಕ್ಕೆ ಸಿಕ್ಕಿರಲಿಲ್ಲ. ಅಂದೇ ಮಧ್ಯಾಹ್ನ ಠಾಣೆಯ ಸಿಬಂದಿ ದೂರುದಾರ ರೊಂದಿಗೆ ಜೋಸಿಯ ಮನೆಗೆ ನೋಟಿಸ್‌ ನೀಡಲು ತೆರಳಿದ್ದು ಆಗಲೂ ಆತ ಮನೆಯಲ್ಲಿ ಇರಲಿಲ್ಲ. ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದ. ಸ್ಥಳೀಯರಲ್ಲಿ ವಿಚಾರಿಸಿದಾಗ ಆತ ಹಗಲು ವೇಳೆ ಮನೆಯಲ್ಲಿ ಇರುವುದಿಲ್ಲ. ರಾತ್ರಿ 9ರ ಬಳಿಕ ಮನೆಗೆ ಬರುತ್ತಾನೆ ಎಂದು ತಿಳಿಸಿದ್ದರು. ಅದರಂತೆ ನ. 21ರಂದು ರಾತ್ರಿ 9 ಗಂಟೆಯ ಅನಂತರ ಪೊಲೀಸರು ಜೋಸಿಯ ಮನೆಗೆ ಹೋಗಿದ್ದರು. ಬಾಗಿಲು ತೆರೆಯದ ಕಾರಣ ನೋಟಿಸ್‌ ಜಾರಿ ಮಾಡದೆ ವಾಪಸಾಗಿದ್ದಾರೆ. ಇದನ್ನು ಜೋಸಿ ತಪ್ಪಾಗಿ ಗ್ರಹಿಸಿ ನಕ್ಸಲರು ಬಂದಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Tags :
BreakingNewsLatestNewsNewsKannadaನಕ್ಸಲ್
Advertisement
Next Article