For the best experience, open
https://m.newskannada.com
on your mobile browser.
Advertisement

ಶಾರುಖ್ ಪುತ್ರನಿಗೆ ಕ್ಲೀನ್ ಚಿಟ್ ನೀಡಿದ್ದ ಎನ್‌ಸಿಬಿ ಅಧಿಕಾರಿ ಸ್ವಯಂ ನಿವೃತ್ತಿ

ಡ್ರಗ್ ಕೇಸ್‌ನಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಕ್ಲೀನ್‌ ಚಿಟ್ ನೀಡಿದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಉಪ ಮಹಾನಿರ್ದೇಶಕ ಸಂಜಯ್ ಸಿಂಗ್‌ ಈಗ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ಇವರು 1996ರ ಬ್ಯಾಚ್‌ನ ಒಡಿಶಾ ಕೆಡರ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಎನ್‌ಸಿಬಿ ಉಪ ಮಹಾನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.
12:55 PM Apr 19, 2024 IST | Ashitha S
ಶಾರುಖ್ ಪುತ್ರನಿಗೆ ಕ್ಲೀನ್ ಚಿಟ್ ನೀಡಿದ್ದ ಎನ್‌ಸಿಬಿ ಅಧಿಕಾರಿ ಸ್ವಯಂ ನಿವೃತ್ತಿ

ಮುಂಬೈ: ಡ್ರಗ್ ಕೇಸ್‌ನಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಕ್ಲೀನ್‌ ಚಿಟ್ ನೀಡಿದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಉಪ ಮಹಾನಿರ್ದೇಶಕ ಸಂಜಯ್ ಸಿಂಗ್‌ ಈಗ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ಇವರು 1996ರ ಬ್ಯಾಚ್‌ನ ಒಡಿಶಾ ಕೆಡರ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಎನ್‌ಸಿಬಿ ಉಪ ಮಹಾನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.

Advertisement

2021ರಲ್ಲಿ ನಟ ಶಾರುಖ್ ಖಾನ್ ಪುತ್ರ ಡ್ರಗ್ ಪ್ರಕರಣವೊಂದರಲ್ಲಿ ಸಿಲುಕಿಕೊಂಡಿದ್ದರು. ಇದು ಕ್ರೂಸ್ ಡ್ರಗ್ಸ್ ಪ್ರಕರಣ ಎಂದು ಫೇಮಸ್ ಆಗಿತ್ತು. 2021 ಅಕ್ಟೋಬರ್ 2 ರಂದು, ಕ್ರೂಸ್ ಶಿಪ್ ಮೇಲೆ ಎನ್ ಸಿಬಿ ದಾಳಿ ನಡೆಸಿ ಆರ್ಯನ್ ಖಾನ್ ಸೇರಿದಂತೆ ಒಟ್ಟು 19 ಮಂದಿಯನ್ನು ಬಂಧಿಸಲಾಗಿತ್ತು.

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಈ ಕಾರ್ಯಾಚರಣೆ ನಡೆದಿತ್ತು. ನಂತರ ಆರ್ಯನ್​ ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. 28 ದಿನಗಳವರೆಗೆ ಜೈಲಿನಲ್ಲಿದ್ದ ಆರ್ಯನ್​ ಅವರಿಗೆ ನಂತರ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಕೊನೆಗೆ ಕೋರ್ಟ್​ ಕ್ಲೀನ್​ ಚಿಟ್​ ನೀಡಿತ್ತು.

Advertisement

ತಮ್ಮ ಸ್ವಯಂ ನಿವೃತ್ತಿಗೆ ಸಂಬಂಧಿಸಿದಂತೆ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಫೆ. 29 ರಂದು ನಾನು ಸೇವೆಯಿಂದ ಸ್ವಯಂ ನಿವೃತ್ತಿ ಪಡೆಯುತ್ತೇನೆ ಎಂದು ವಿನಂತಿ ಮಾಡಿದ್ದೆ. ನನ್ನ ಮನವಿಯನ್ನು ಅನುಮೋದಿಸಲು ಒಡಿಶಾ ರಾಜ್ಯ ಸರ್ಕಾರವೂ ಸಮರ್ಥ ಪ್ರಾಧಿಕಾರವಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿತ್ತು. ಅದರಂತೆ ಇಂದು ನನ್ನ ಮನವಿಯನ್ನು ಅಂಗೀಕರಿಸಲಾಗಿದೆ ಎಂದು ಮಾಹಿತಿ ಸಿಕ್ಕಿದ್ದು, ಏಪ್ರಿಲ್ 30 ನನ್ನ ವೃತ್ತಿಯ ಕೊನೆ ದಿನವಾಗಿದೆ. ಮೂರು ತಿಂಗಳ ನೋಟೀಸ್ ಪಿರೇಡ್‌ನಲ್ಲಿ ನಾನು ರಿಲ್ಯಾಕ್ಸ್ ಆಗಿದ್ದೇನೆ ಎಂದು ಹೇಳಿದ್ದಾರೆ.

Advertisement
Tags :
Advertisement