For the best experience, open
https://m.newskannada.com
on your mobile browser.
Advertisement

ʼಇಂಡಿಯಾʼ ಬ್ಲಾಕ್​​ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು?

ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳ ಮುಂದೆ ದೊಡ್ಡ ಪ್ರಶ್ನೆ ಎದುರಾಗಿದೆ. ವಿರೋಧ ಪಕ್ಷದ ಮೈತ್ರಿ I.N.D.I.A(ಇಂಡಿಯಾ) (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಅಲಯನ್ಸ್) ಬ್ಲಾಕ್​ನಿಂದ ಪ್ರಧಾನ ಮಂತ್ರಿ ಅಭ್ಯರ್ಥಿ ಯಾರು ಎಂದು ಆಗಾಗ್ಗೆ ಕೇಳಲಾಗುತ್ತದೆ? ಇದೀಗ ಈ ಬಗ್ಗೆ ಸ್ವತಃ ರಾಹುಲ್ ಗಾಂಧಿ ಉತ್ತರ ನೀಡಿದ್ದಾರೆ.
04:46 PM Apr 05, 2024 IST | Ashitha S
ʼಇಂಡಿಯಾʼ ಬ್ಲಾಕ್​​ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳ ಮುಂದೆ ದೊಡ್ಡ ಪ್ರಶ್ನೆ ಎದುರಾಗಿದೆ. ವಿರೋಧ ಪಕ್ಷದ ಮೈತ್ರಿ I.N.D.I.A(ಇಂಡಿಯಾ) (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಅಲಯನ್ಸ್) ಬ್ಲಾಕ್​ನಿಂದ ಪ್ರಧಾನ ಮಂತ್ರಿ ಅಭ್ಯರ್ಥಿ ಯಾರು ಎಂದು ಆಗಾಗ್ಗೆ ಕೇಳಲಾಗುತ್ತದೆ? ಇದೀಗ ಈ ಬಗ್ಗೆ ಸ್ವತಃ ರಾಹುಲ್ ಗಾಂಧಿ ಉತ್ತರ ನೀಡಿದ್ದಾರೆ.

Advertisement

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಖರ್ಗೆ, ಪಕ್ಷದ ಅದಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಿ ಚಿದಂಬರಂ ಮತ್ತು ಇತರರು ಶುಕ್ರವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ‘ನ್ಯಾಯ ಪತ್ರ’ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಪ್ರಜಾಪ್ರಭುತ್ವ ರಕ್ಷಣೆಗಾಗಿ ಚುನಾವಣೆ ನಡೆಯುತ್ತಿದೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸಲು ಪ್ರಯತ್ನಿಸುತ್ತಿರುವವರ ಮತ್ತು ಅವುಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿರುವವರ ನಡುವೆ ಈ ಚುನಾವಣೆಗಳು ನಡೆಯುತ್ತಿವೆ. ಬಿಜೆಪಿಗೆ ಕಠಿಣ ಹೋರಾಟ ನೀಡಿ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಮಾಧ್ಯಮಗಳ ನಿರೀಕ್ಷೆಗೆ ವ್ಯತಿರಿಕ್ತವಾಗಿ ಈ ಬಾರಿಯ ಚುನಾವಣೆ ಫಲಿತಾಂಶ ಬರಲಿದೆ. ಬಿಜೆಪಿ ಸಿಬಿಐ, ಇಡಿ ಮತ್ತು ಐಟಿ ಏಜೆನ್ಸಿಗಳನ್ನ ತನ್ನ ಕೈಯಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ ಎಂದು ರಾಹುಲ್ ಆರೋಪಿಸಿದರು.

Advertisement

" I.N.D.I.A ಬ್ಲಾಕ್ ಸೈದ್ಧಾಂತಿಕವಾಗಿ ಚುನಾವಣೆಯನ್ನು ಎದುರಿಸುತ್ತಿದೆ. ಗೆಲುವಿನ ಗುರಿಯೊಂದಿಗೆ ಕಣಕ್ಕೆ ಇಳಿಯುತ್ತಿದ್ದೇವೆ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಚುನಾವಣೆಯ ನಂತರವೇ ಪ್ರಧಾನಿ ಅಭ್ಯರ್ಥಿಯ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದರು. ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಗುರಿಯೊಂದಿಗೆ I.N.D.I.A ಕೂಟವನ್ನು ರಚಿಸಲಾಗಿದೆ" ಎಂದು ಮತ್ತೊಮ್ಮೆ ತಿಳಿಸಿದ್ದಾರೆ.

Advertisement
Tags :
Advertisement