For the best experience, open
https://m.newskannada.com
on your mobile browser.
Advertisement

ನೇಜಾರು ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ಫೆ. 12ರವರೆಗೆ ವಿಸ್ತರಣೆ

ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
09:54 AM Feb 08, 2024 IST | Ashika S
ನೇಜಾರು ಹತ್ಯೆ ಪ್ರಕರಣ  ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ಫೆ  12ರವರೆಗೆ ವಿಸ್ತರಣೆ

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

Advertisement

ಆರೋಪಿಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು.

ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಕರಣದ ಚಾರ್ಜ್‌ಶೀಟ್‌ನ್ನು ಪ್ರಕರಣದ ತನಿಖಾಧಿಕಾರಿಗಳು ಫೆ.9ರಂದು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ಎಂದು ತಿಳಿದು ಬಂದಿದೆ.

Advertisement

Advertisement
Tags :
Advertisement