ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೇಜಾರು ಕೊಲೆ ಪ್ರಕರಣ: ಆರೋಪಿ ಚೌಗುಲೆಗೆ ಡಿ. 5ರವರೆಗೆ ನ್ಯಾಯಾಂಗ ಬಂಧನ

ನೇಜಾರು ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
03:26 PM Nov 22, 2023 IST | Ashika S

ಉಡುಪಿ: ನೇಜಾರು ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

Advertisement

ಆರೋಪಿಯನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದುಕೊಂಡಿದ್ದರು. ಬಳಿಕ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ, ಸ್ಥಳ ತನಿಖೆ, ಮಹಜರು, ಹೇಳಿಕೆ, ಆರೋಪಿ ಗುರುತು ಸೇರಿದಂತೆ ಎಲ್ಲ ರೀತಿಯ ತನಿಖೆ ಪ್ರಕ್ರಿಯೆಯನ್ನು ವಾರದೊಳಗೆ ಪೂರ್ಣಗೊಳಿಸಿದ್ದಾರೆ.

ಇದೀಗ ಆರೋಪಿಯನ್ನು ನ.28ರವರೆಗೆ ಕಸ್ಟಡಿಯಲ್ಲಿ ಇಟ್ಟುಕೊಳ್ಳುವ ಅಗತ್ಯ ಇಲ್ಲ ಎಂಬುದನ್ನು ಮನಗಂಡ ಪೊಲೀಸರು, ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯಕ್ಕೆ ಕರೆತಂದರು. ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು.

Advertisement

ನ್ಯಾಯಾಧೀಶೆ ದೀಪಾ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಡಿ. 5ರಂದು ಮತ್ತೆ ಆರೋಪಿಯನ್ನು ನ್ಯಾಯಕ್ಕೆ ಹಾಜರಿ ಪಡಿಸುವಂತೆ ನ್ಯಾಯಾಧೀಶರು ಆದೇಶಿಸಿದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು.

Advertisement
Tags :
LatetsNewsNewsKannadaಆರೋಪಿಉಡುಪಿನೇಜಾರುನ್ಯಾಯಾಲಯಪ್ರಕರಣಪ್ರವೀಣ್ ಅರುಣ್ ಚೌಗುಲೆಹತ್ಯೆ
Advertisement
Next Article