ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೊಸ ವರ್ಷದ ಸಂಭ್ರಮಾಚರಣೆ: ಬೆಂಗಳೂರಿನಲ್ಲಿ ಸೃಷ್ಟಿಯಾಯ್ತು 8 ಟನ್ ಕಸ

2024ರ ಹೊಸ ವರ್ಷಾಚರಣೆ ಮುಗಿಯುತ್ತಿದಂತೆ ಬೆಂಗಳೂರಿನಲ್ಲಿ ಒಟ್ಟಾರೆಯಾಗಿ 8 ಟನ್ ಕಸ ಶೇಖರಣೆಯಾಗಿದೆ. 
03:10 PM Jan 02, 2024 IST | Ashika S

ಬೆಂಗಳೂರು: 2024ರ ಹೊಸ ವರ್ಷಾಚರಣೆ ಮುಗಿಯುತ್ತಿದಂತೆ ಬೆಂಗಳೂರಿನಲ್ಲಿ ಒಟ್ಟಾರೆಯಾಗಿ 8 ಟನ್ ಕಸ ಶೇಖರಣೆಯಾಗಿದೆ.

Advertisement

ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಸೋಮವಾರ ನಗರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ನಿಂದ 8 ಟನ್ ತ್ಯಾಜ್ಯವನ್ನು ಸಂಗ್ರಹಿಸಿದೆ ಎಂದು ಹೇಳಿದೆ.

80ಕ್ಕೂ ಹೆಚ್ಚು ಪೌರಕಾರ್ಮಿಕರು ಹಾಗೂ ಮೂವರು ಮೇಲ್ವಿಚಾರಕರು ಸೋಮವಾರ ಬೆಳಗಿನ ಜಾವ 3.30ಕ್ಕೆ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿದರು. ಬೆಳಗ್ಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆಗಳಲ್ಲಿ ಟನ್‌ಗಟ್ಟಲೆ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.

Advertisement

ತ್ಯಾಜ್ಯ ಸಂಗ್ರಹಿಸಲು ಸುಮಾರು 80 ಪೌರ ಕಾರ್ಮಿಕರು, ಮೂವರು ಮೇಲ್ವಿಚಾರಕರು, ಒಂದು ಕಾಂಪ್ಯಾಕ್ಟರ್ ಮತ್ತು 7 ಆಟೋ ಟಿಪ್ಪರ್‌ಗಳನ್ನು ನಿಯೋಜಿಸಲಾಗಿತ್ತು.

ಅಧಿಕಾರಿಗಳ ಪ್ರಕಾರ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ರಿಚ್ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಮತ್ತು ಕಸ್ತೂರ್ಬಾ ರಸ್ತೆ ಸೇರಿದಂತೆ ಇತರೆಡೆಗಳಿಂದ ಶಾಂತಿನಗರ ವಿಭಾಗದ ಘನತ್ಯಾಜ್ಯ ಇಲಾಖೆ ಅಪಾರ ಪ್ರಮಾಣದ ತ್ಯಾಜ್ಯ ಸಂಗ್ರಹಿಸಿದ್ದಾರೆ.

ರಸ್ತೆ ಮತ್ತು ಫುಟ್‌ಪಾತ್‌ಗಳಲ್ಲಿ ಪ್ಲಾಸ್ಟಿಕ್ ಕವರ್‌ಗಳು, ಪ್ಲಾಸ್ಟಿಕ್ ತ್ಯಾಜ್ಯಗಳು, ಚಪ್ಪಲಿಗಳು, ಗಾಜಿನ ಬಾಟಲಿಗಳು ಮತ್ತು ಇತರ ವಸ್ತುಗಳನ್ನು ಎಸೆಯಲಾಗಿತ್ತು.

Advertisement
Tags :
8 ಟನ್LatetsNewsNEW YEARNewsKannadaಕಸಹೊಸ ವರ್ಷಾಚರಣೆ
Advertisement
Next Article