ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮೇಶ್ವರಂ ಕೆಫೆ ಸ್ಫೋಟದ ‘ಮಾಸ್ಟರ್ ಮೈಂಡ್’ ಪ.ಬಂಗಾಳದಲ್ಲಿ ಬಂಧನ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ಎನ್ಐಎ ವಶಕ್ಕೆ ಪಡೆದಿದೆ ಎಂದು ಮೂಲಗಳು ಇಂದು ತಿಳಿಸಿವೆ.
10:31 AM Apr 12, 2024 IST | Ashitha S

ಬೆಂಗಳೂರು:   ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಬಂಧಿಸಲಾಗಿದೆ.

Advertisement

ಖಚಿತ ಮಾಹಿತಿ ಮತ್ತು ಗುಪ್ತಚರ ಇಲಾಖೆಗೆ ದೊರೆತ ಸುಳಿವಿನ ಆಧಾರದಲ್ಲಿ ಎನ್ಐಎ ತಂಡವು ಹಲವಾರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾರ್ಚ್​ 1ರಂದು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಸಾವು ಸಂಭವಿಸಿರಲಿಲ್ಲ. ನಂತರ ಆರಂಭದಲ್ಲಿ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದರು. ಆ ನಂತರ ಎನ್​​ಐಎಗೂ ತನಿಖೆಯ ಹೊಣೆ ವಹಿಸಲಾಗಿತ್ತು. ಆದಾಗ್ಯೂ, ಶಂಕಿತನನ್ನು ಬಂಧಿಸಲು ಈವರೆಗೆ ಸಾಧ್ಯವಾಗಿರಲಿಲ್ಲ.  ಆದರೆ  ಇದೀಗ ಇಬ್ಬರು ಬಂಧಿಸಿದ್ದಾರೆ.

Advertisement

Advertisement
Tags :
BreakingNewscrimeGOVERNMENTindiaKARNATAKALatestNewsNewsKarnatakaNIAPOLICE
Advertisement
Next Article